ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸದ್ಗುರು ಜಗ್ಗಿ ವಾಸುದೇವ ವಿರುದ್ಧ ದೂರು ದಾಖಲು

ಚಿಕ್ಕಬಳ್ಳಾಪುರ; ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ವಿರುದ್ಧ ದೂರು ದಾಖಲಾಗಿದೆ. ಜಗ್ಗಿ ವಾಸುದೇವ ಅವರು ಜೀವಂತ ಹಾವು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಉರಗ ತಜ್ಞ ಪೃಥ್ವಿರಾಜ ದೂರು ನೀಡಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ನಾಗಮಂಟಪ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಗ್ಗಿ ವಾಸುದೇವ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.