ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸಂಸದ ಪ್ರಜ್ವಲ್ ಪಾಸಪೋರ್ಟ ರದ್ಧತಿ ಪ್ರಕ್ರಿಯೆ ಆರಂಭ

ಹೊಸದಿಲ್ಲಿ, ಮೇ ೨೩: ಕೊನೆಗೂ ಕೇಂದ್ರ ಸರ್ಕಾರ  ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸಪೋರ್ಟ ರದ್ಧತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.  ರಾಜತಾಂತ್ರಿಕ ಪಾಸಪೋರ್ಟ ರದ್ದತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದು ಬಂದಿದೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸಪೋರ್ಟ್‌ ರದ್ದತಿ ಕೋರಿ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದರು. ಅಲ್ಲದೇ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸುವಂತೆಯೂ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ವಿದೇಶಾಂಗ ಸಚಿವಾಲಯ ಕೊನೆಗೂ ಪ್ರತಿಕ್ರಿಯೆ ನೀಡಿದೆ.

ಎಸ್‌ಐಟಿಯಿಂದಲೂ ಸಹ ಪಾಸಪೋರ್ಟ್‌ ರದ್ದತಿ ಮನವಿ ಬಂದಿದೆ. ಹೀಗಾಗಿ ಪಾಸಪೋರ್ಟ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.