LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವು

ಹೊಸದಿಲ್ಲಿ, ಆಗಸ್ಟ್ 3: ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಹಾಗೂ ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಬಿಹಾರದಲ್ಲಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಒಂದು ಸ್ಥಾನ ಗೆದ್ದಿವೆ.

ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಿಹಾರದ ಬಂಕಿಪುರ ಕ್ಷೇತ್ರದಲ್ಲಿ ಕಳೆದ 31 ವರ್ಷಗಳಿಂದ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸುತ್ತಿದ್ದರು. ಆದರೆ ಈ ಬಾರಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಮೊದಲ ಬಾರಿಗೆ ಈ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ. ಇದು ಪಕ್ಷದ ಸ್ಥಾಪನೆಯ ನಂತರದ ಮೊದಲ ಚುನಾವಣಾ ಗೆಲುವಾಗಿದ್ದು, ಪ್ರಶಾಂತ್ ಕಿಶೋರ್ ಅವರ ವೈಯಕ್ತಿಕ ರಾಜಕೀಯ ಜೀವನದ ಮೊದಲ ಚುನಾವಣಾ ವಿಜಯವೂ ಆಗಿದೆ.

ಅಕ್ಟೋಬರ್ 2024ರಲ್ಲಿ ಜನ ಸುರಾಜ್ ಪಕ್ಷವನ್ನು ಸ್ಥಾಪಿಸಿದ್ದ ಪ್ರಶಾಂತ್ ಕಿಶೋರ್, 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 238 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ಉಪಚುನಾವಣೆಯ ಗೆಲುವಿನೊಂದಿಗೆ ಪಕ್ಷ ಮೊದಲ ಬಾರಿಗೆ ಬಿಹಾರ ವಿಧಾನಸಭೆಯಲ್ಲಿ ತನ್ನ ಖಾತೆ ತೆರೆದಿದೆ.

ದೇಶದ ವಿವಿಧ ರಾಜಕೀಯ ಪಕ್ಷಗಳಿಗೆ ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದ ಪ್ರಶಾಂತ್ ಕಿಶೋರ್, ಈ ಬಾರಿ ಸ್ವತಃ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ದಾಖಲಿಸಿದ್ದಾರೆ. 2025ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸದಿರುವುದು ಪಕ್ಷದ ಸೋಲಿಗೆ ಕಾರಣವಾಗಿತ್ತು ಎಂದು ಅವರು ಹಿಂದೆ ಒಪ್ಪಿಕೊಂಡಿದ್ದು, ಈ ಬಾರಿ ಆ ಕೊರತೆಯನ್ನು ನೀಗಿಸಿಕೊಂಡಿದ್ದಾರೆ.

ಈ ಕ್ಷೇತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಪ್ರತಿನಿಧಿಸುತ್ತಿದ್ದರು. ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಂಕಿಪುರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು. ಹೀಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲೇ ಜನ ಸುರಾಜ್ ಜಯ ಸಾಧಿಸಿರುವುದು ವಿಶೇಷ ಮಹತ್ವ ಪಡೆದಿದೆ.

ಗುಜರಾತ್‌ನ ಮಂಜಲ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸತೇಂದ್ರಭಾಯಿ ಪಟೇಲ್, ಕಾಂಗ್ರೆಸ್ ಅಭ್ಯರ್ಥಿ ಭಿಖಾಭಾಯಿ ರಬರಿ ವಿರುದ್ಧ 30,630 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಿಜೆಪಿ ಅಭ್ಯರ್ಥಿ 55,481 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 24,851 ಮತಗಳನ್ನು ಗಳಿಸಿದರು. ಈ ಕ್ಷೇತ್ರದಲ್ಲಿ 2,247 ನೋಟಾ ಮತಗಳು ದಾಖಲಾಗಿವೆ. ಹಿರಿಯ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಯೋಗೇಶ್ ಪಟೇಲ್ ಅವರ ನಿಧನದಿಂದ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

ಮಧ್ಯಪ್ರದೇಶದ ದಾಟಿಯಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘನಶ್ಯಾಮ್ ಸಿಂಗ್ 66,757 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಅಶುತೋಷ್ ತಿವಾರಿ ವಿರುದ್ಧ 6,016 ಮತಗಳ ಅಂತರದಿಂದ ಜಯ ಸಾಧಿಸಿದರು. ಬಿಜೆಪಿ ಅಭ್ಯರ್ಥಿಗೆ 60,741 ಮತಗಳು ಲಭಿಸಿವೆ. ಈ ಕ್ಷೇತ್ರದಲ್ಲಿ ಒಟ್ಟು 21 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 456 ನೋಟಾ ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರ ಶಾಸಕ ಸ್ಥಾನ ರದ್ದಾದ ಹಿನ್ನೆಲೆಯಲ್ಲಿ ದಾಟಿಯಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ