LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಡ್ರಾಪ್ ಕೇಳಿದ ಬಾಲಕಿಯರ ಮೇಲೆ ಅತ್ಯಾಚಾರ; ಐವರ ಬಂಧನ

ಕೊಡಗು : ಕಾರಿನಲ್ಲಿ ಡ್ರಾಪ್ ಕೇಳಿದ ಬಾಲಕಿಯ ಮೇಲೆ ಯುವಕರು ಅತ್ಯಾಚಾರವೆಸಗಿದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ನಡೆದಿದೆ.



ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ಅತ್ಯಾಚಾರ ಪ್ರಕರಣ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮತ್ತೋರ್ವ ಬಾಲಕಿ ಮೇಲೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.



ಜೂನ್ 9 ರಂದು ಮೂವರು ಸ್ನೇಹಿತರ ಜೊತೆ ರಸ್ತೆಯಲ್ಲಿ ಬಾಲಕಿಯರು ನಡೆದು ಹೋಗುತ್ತಿದ್ದರು. ಈ ವೇಳೆ ದಾರಿಯಲ್ಲಿ ಬಂದ ಅಪರಿಚಿತ ಕಾರನ್ನು ಮೂವರೂ ಹತ್ತಿದ್ದಾರೆ. ನಾಗರಹೊಳೆಗೆ ಡ್ರಾಪ್ ನೀಡುವಂತೆ ಬಾಲಕಿಯರು ವಿನಂತಿ ಮಾಡಿದ್ದಾರೆ.



ಮಾರುತಿ 800 ಕಾರಿನಲ್ಲಿ ಬಾಲಕಿಯರು ನಾಗರಹೊಳೆ ಕಡೆ ಹೋಗಿದ್ದು, ದಾರಿ ಮಧ್ಯೆ ಕಾಫಿ ತೋಟದಲ್ಲಿ ಓರ್ವ ಬಾಲಕಿ ಮೇಲೆ ನವೀಂದ್ರ, ಅಕ್ಷಯ ಎಂಬುವವರು ಅತ್ಯಾಚಾರ ಮಾಡಿದ್ದಾರೆ.. ಮತ್ತೋರ್ವ ಬಾಲಕಿ ಮೇಲೆ ರಾಹುಲ್, ಮನು, ಸಂದೀಪ್ ಎಂಬುವವರಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.



ಸಂತ್ರಸ್ತ ಬಾಲಕಿಯರಿಂದ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ ವರಿಷ್ಠ ರಾಮರಾಜನ್ ಭೇಟಿ ನೀಡಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ