ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವದ ಕೆಲವೆಡೆ ಮತ್ತೆ ಹಬ್ಬಿದ ಕೋವಿಡ್; ಭಾರತದಲ್ಲಿ ವಿಶೇಷ ಕಾರ್ಯಪಡೆ ರಚನೆ

ಬೀಜಿಂಗ: ಚೀನಾ, ಅಮೆರಿಕಾ, ಕೊರಿಯಾ, ಬ್ರಾಜಿಲ್ ದೇಶಗಳಲ್ಲಿ ಮತ್ತೆ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಕಳೆದ ಬಾರಿಯ ನಿರ್ಲಕ್ಷ್ಯದಿಂದ ಲಕ್ಷಾಂತರ ಜೀವಗಳು ಬಲಿಯಾಗಿದ್ದರಿಂದ ಈ ಬಾರಿ ಭಾರತ ಸರ್ಕಾರ ಕೆಲ ತುರ್ತು ನಿರ್ಧಾರಗಳನ್ನು ತೆಗೆದುಕೊಂಡಿದ್ದು ಕೇಂದ್ರ ಆರೋಗ್ಯ ಇಲಾಖೆ ಹೊಸ ಅಧಿಸೂಚನೆ ಹೊರಡಿಸಿದೆ.


ಚೀನಾ ಸೇರಿದಂತೆ ವಿವಿಧ ದೇಶಗಳ ಕೋವಿಡ್ ಸೋಂಕು ಪ್ರಕರಣಗಳ ಅಂಕಿ-ಅಂಶಗಳನ್ನು, ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರ ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಭಾರತದ ಮೇಲೆ ಪರಿಣಾಮ ಹಾಗೂ ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಹಾಗೂ ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸೂಚಿಸಲಾಗಿದೆ.

ಕೋವಿಡ್ ತಪಾಸಣೆ ವೇಳೆ ಪಾಸಿಟಿವ್ ಬಂದರೆ ಜಿನೋಮ್ ಸೀಕ್ವೆನ್ಸಿಂಗ್ ಗಾಗಿ ಗರಿಷ್ಠ ಪ್ರಮಾಣದಲ್ಲಿ ಇನ್ಸಾಕಾಗ್ ಪ್ರಯೋಗಾಲಯಗಳಿಗೆ ಕಳುಹಿಸಬೇಕು. ಈ ಮೂಲಕ ಹೊಸ ರೂಪಾಂತರಿ ಪತ್ತೆಗೆ ಸಹಕರಿಸಬೇಕು ಎಂದು ಸೂಚಿಸಿದೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.