ಬೆಳಗಾವಿ, 25: ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ಘಟಕದ ವತಿಯಿಂದ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ (ಸ)’ ಎಂಬುದು ಅಭಿಯಾನದ ಶೀರ್ಷಿಕೆಯಾಗಿದೆ.
ಪ್ರವಾದಿ ಮುಹಮ್ಮದ್ (ಸ) ಅವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವಕುಲದ ಏಕತೆಯ ತತ್ವಗಳ ಮೇಲೆ ಸ್ಥಾಪಿತವಾಗಿತ್ತು. ಜನರ ಮನಸ್ಸುಗಳನ್ನು ಸಂಸ್ಕರಿಸಿ, ನೈತಿಕತೆ ಹಾಗೂ ಚಾರಿತ್ರ್ಯವನ್ನು ಶುದ್ಧೀಕರಿಸುವ ಮೂಲಕ ವ್ಯಕ್ತಿಗಳು ಹಾಗೂ ಸಮಾಜವನ್ನು ಪರಿವರ್ತಿಸಿದ ಮಹತ್ವದ ಸಂದೇಶವನ್ನು ಅವರು ನೀಡಿದರು ಎಂದು ಜಮಾಅತೆ ಇಸ್ಲಾಮಿ ಹಿಂದ್ ತಿಳಿಸಿದೆ.
ಪ್ರವಾದಿ ಮುಹಮ್ಮದ್ (ಸ) ಅವರ ಕ್ರಾಂತಿಯು ಸಂಪೂರ್ಣ ಮಾನವೀಯ ಕ್ರಾಂತಿಯಾಗಿದ್ದು, ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ಬೆಳಕು ನೀಡಿದ ಪರಿವರ್ತನೆಯಾಗಿದೆ. ಶಾಂತಿ, ಸಮೃದ್ಧಿ ಹಾಗೂ ಭಯಮುಕ್ತ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು ಎಂದು ಅಭಿಯಾನದ ಆಯೋಜಕರು ಹೇಳಿದ್ದಾರೆ.
ಸೌಹಾರ್ದ ಬಲಪಡಿಸುವ ಗುರಿ
ಪ್ರವಾದಿ ಮುಹಮ್ಮದ್ (ಸ) ಅವರ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು ಹಾಗೂ ಪರಸ್ಪರ ಬಾಂಧವ್ಯ ಮತ್ತು ಸೌಹಾರ್ದ ಸಂಬಂಧಗಳನ್ನು ಬಲಪಡಿಸುವುದು ಸೀರತ್ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ಎರಡು ಮಹತ್ವದ ಕನ್ನಡ ಕೃತಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ ಮಾಸ್ಟರ್ ಅವರು ರಚಿಸಿರುವ ‘ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಹಾಗೂ ‘ವಾರ್ತಾಭಾರತಿ’ ದಿನಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದಿರುವ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಗಳು ಬಿಡುಗಡೆಯಾಗಲಿವೆ.
ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮ
ಸೀರತ್ ಅಭಿಯಾನದ ಪ್ರಯುಕ್ತ ರಾಜ್ಯದ ವಿವಿಧೆಡೆ ವೈಯಕ್ತಿಕ ಭೇಟಿ, ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ವಿಷಯದ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಷನ್, ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಬೆಳಗಾವಿ ನಗರದಲ್ಲಿಯೂ ಅಭಿಯಾನದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವೈಯಕ್ತಿಕ ಭೇಟಿ, ಸಾರ್ವಜನಿಕ ಸಭೆ, ಸೀರತ್ ಪ್ರವಚನ, ವಿಚಾರಗೋಷ್ಠಿ, ಸಂವಾದ ಹಾಗೂ ಸಮಾಜಸೇವಾ ಚಟುವಟಿಕೆಗಳ ಮೂಲಕ ಅಭಿಯಾನದ ಸಂದೇಶವನ್ನು ಜನರಿಗೆ ತಲುಪಿಸಲಾಗುತ್ತದೆ.
ಸ್ವಾಗತ ಸಮಿತಿ ರಚನೆ
ಸೀರತ್ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಉಲೇಮಾಗಳು ಹಾಗೂ ಮುಸ್ಲಿಂ ಸಮುದಾಯದ ಗಣ್ಯರನ್ನು ಒಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಅಭಿಯಾನದ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಪ್ರವಾದಿ ಮುಹಮ್ಮದ್ (ಸ) ಅವರ ಜೀವನ, ಸಂದೇಶ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದ ಎಲ್ಲ ವರ್ಗದ ಜನರಿಗೆ ಪರಿಚಯಿಸುವ ಮೂಲಕ ಪರಸ್ಪರ ಅರಿವು, ಸಹಬಾಳ್ವೆ ಹಾಗೂ ಸೌಹಾರ್ದವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಇದಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ಘಟಕದ ಪ್ರಕಟಣೆ ತಿಳಿಸಿದೆ.