LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ತೀವ್ರ ವಿರೋಧ ಕಾರಣ ‘ದಹಿ’ ಹಿಂದಿ ಪದ ಕೈಬಿಟ್ಟ ಎಫ್ಎಸ್ಎಸ್ಎಐ

ಹೊಸದಿಲ್ಲಿ: ಮೊಸರಿನ ಪೊಟ್ಟಣಗಳ ಮೇಲೆ ‘ದಹಿ’ ಎಂಬ ಹಿಂದಿ ಪದ ಕಡ್ಡಾಯವಾಗಿ ಉಲ್ಲೇಖಿಸಲೇಬೇಕೆಂದು ನೀಡಿದ್ದ ಆದೇಶವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ತೀವ್ರ ವಿರೋಧದ ಹಿನ್ನೆಲೆಯಲ್ಲಿ ಗುರುವಾರ ಪರಿಷ್ಕರಿಸಿದೆ. ಪ್ಯಾಕೆಟ್‌ಗಳ ಮುದ್ರಿತ ಲೇಬಲ್‌ಗಳಲ್ಲಿ ಇಂಗ್ಲಿಷ್‌ ಜತೆಗೆ, ಪ್ರಾದೇಶಿಕ ಭಾಷೆ ಹೆಸರು ಅಂದರೆ ಮೊಸರು ಉಲ್ಲೇಖಿಸಬಹುದು ಎಂದು ಹೇಳಿದೆ.



ರಾಜ್ಯಗಳ ಹಾಲು ಒಕ್ಕೂಟಗಳಿಗೆ ಎಫ್‌ಎಸ್‌ಎಸ್‌ಎಐ ಇತ್ತೀಚೆಗೆ ನೀಡಿದ್ದ ಸೂಚನೆ ತೀವ್ರ ವಿರೋಧಕ್ಕೆ ಗುರಿಯಾಗಿತ್ತು. ಕರ್ನಾಟಕದಲ್ಲಿ ಕನ್ನಡ ಪರ ಹೋರಾಟಗಾರರು ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರೂ ಟ್ವೀಟ್‌ ಮಾಡಿ ಕಿಡಿ ಕಾರಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿಂದಲೂ ಅಸಮಾಧಾನ ವ್ಯಕ್ತವಾಗಿತ್ತು. ಎಫ್‌ಎಸ್‌ಎಸ್‌ಎಐನ ಈ ಆದೇಶವನ್ನು ಪಾಲಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತ್ತು.



ಈ ಹಿನ್ನೆಲೆಯಲ್ಲಿ ಆದೇಶ ಪರಿಷ್ಕರಣೆಗೊಂಡಿದೆ. ಲೇಬಲ್‌ಗಳ ಮೇಲೆ ‘Curd’ ಎಂದು ಬಳಸಿ, ಆವರಣಗಳಲ್ಲಿ ಯಾವುದೇ ಇತರ ಪ್ರಚಲಿತ ಪ್ರಾದೇಶಿಕ ಹೆಸರನ್ನು ಉಲ್ಲೇಖಿಸಲು ಅನುಮತಿ ನೀಡಲಾಗಿದೆ. ಕರ್ಡ ಇಂಗ್ಲೀಷ ಪದ ಕೈಬಿಟ್ಟು 'ದಹಿ' ಎಂಬ ಹಿಂದಿ ಪದವನ್ನು ಕಡ್ಡಾಯವಾಗಿ ಉಲ್ಲೇಖಿಸಬೇಕಾಗಿ ಎಫ್‌ಎಸ್‌ಎಸ್‌ಎಐ ಇತ್ತೀಚೆಗೆ ಆದೇಶ ಹೊರಡಿಸಿತ್ತು.



‘ಆವಿನ್’ ಎಂಬ ಬ್ರಾಂಡ್‌ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಎಫ್‌ಎಸ್‌ಎಸ್‌ಎಐನ ನಿರ್ದೇಶನದಂತೆ ತನ್ನ ಮುದ್ರಿತ ಸ್ಯಾಚೆಟ್‌ಗಳಲ್ಲಿ 'ದಹಿ' ಎಂಬ ಹಿಂದಿ ಪದವನ್ನು ಬಳಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ತಮಿಳಿನಲ್ಲಿ ಮಾತ್ರ ಉತ್ಪನ್ನದ ಹೆಸರು (ತೈರ್‌ ಎಂದು) ಉಲ್ಲೇಖಿಸುವುದಾಗಿ ಹೇಳಿತ್ತು.



ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಎಫ್‌ಎಸ್‌ಎಸ್‌ಎಐನ ಈ ಕ್ರಮವನ್ನು ಹಿಂದಿ ಹೇರಿಕೆ ಪ್ರಯತ್ನ ಎಂದು ಖಂಡಿಸಿದ್ದರು.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ