LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಘೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿದ್ದರಾಮಯ್ಯ ಸವಾಲು

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು.



ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.



ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.



ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.



ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.

ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.

ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.



ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.



ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.



ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.



ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪ್ರತಿಭಟನೆಗೆ ತೆರಳದಂತೆ ಮಹಾರಾಷ್ಟ್ರ ಪೊಲೀಸರ ನೋಟಿಸ್ಸ್ಟಿಂಗ್‌ ಕುತಂತ್ರ: ಮುಂದಿನ ವಾರ ದಾಖಲೆ ಬಿಡುಗಡೆಸಂಕೇಶ್ವರ ಬಳಿ ಅಪಘಾತ: ಟಿಪ್ಪರ್‌ಗೆ ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯಅಂಗನವಾಡಿ ನೇಮಕಾತಿಯಲ್ಲಿ ಹಣ ವಸೂಲಿ ಆರೋಪ: ಹುಕ್ಕೇರಿ ಸಿಡಿಪಿಒಗೆ ನೋಟಿಸ್ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಸಾಧ್ಯತೆನವಲಗುಂದ ಬಳಿ ಭೀಕರ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿಗೆ ನಾಲ್ವರ ಬಲಿಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಎಲ್ಲೆಡೆ ನಿರ್ಬಂಧಪ್ರತಿಭಟನೆಗೆ ಪರ್ಯಾಯ ಸ್ಥಳ ಗುರುತಿಸಿ: ಸುಪ್ರೀಂ ಕೋರ್ಟಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ: ದೆಹಲಿ ಪೊಲೀಸರಿಗೆ ಎನ್‌ಎಚ್‌ಆರ್‌ಸಿ ನೋಟಿಸ್‘ಸಂವಿಧಾನ ಉಳಿಸಲು ಬೀದಿಗಿಳಿಯಿರಿ’: ದೇಶದ ಜನತೆಗೆ ತುಷಾರ್ ಗಾಂಧಿ ಕರೆ