LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶೈಕ್ಷಣಿಕ ಪ್ರವಾಸ ಆರಂಭಿಸಲು ಸರ್ಕಾರದ ಅನುಮತಿ

ಬೆಂಗಳೂರು: ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.



ಡಿಸೆಂಬರ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ ನಂತರ ಶೈಕ್ಷಣಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಪೋಷಕರ ಒಪ್ಪಿಗೆಯೊಂದಿಗೆ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಬೇಕು ಎಂದು ಹೇಳಲಾಗಿದೆ.



ರಾಜ್ಯ ಸಾರಿಗೆ ಸಂಸ್ಥೆ, ರಾಜ್ಯ ಪ್ರವಾಸೋದ್ಯಮ ಇಲಾಖೆ ವಾಹನಗಳನ್ನು ಪ್ರವಾಸಕ್ಕೆ ಬಳಸಬೇಕು. ಖಾಸಗಿ ಹಾಗೂ ಮಿನಿ ಬಸ್ ಗಳನ್ನು ಬಳಸಬಾರದು. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಗಮನ ನೀಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರವಾಸ ಕೈಗೊಂಡ ವಿದ್ಯಾರ್ಥಿನಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರು ಇರಲೇಬೇಕು.



ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾನ್ಯತೆ ನವೀಕರಿಸಿಕೊಳ್ಳದ ಶಾಲೆಗಳು ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವಂತಿಲ್ಲ. ಪ್ರವಾಸ ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ದಿನ ಅಥವಾ ಭಾನುವಾರ ಶಾಲೆ ನಡೆಸುವ ಮೂಲಕ ಕೊರತೆಯ ಪಠ್ಯ ಚಟುವಟಿಕೆ ಕಲಿಸಬೇಕು. ಪ್ರವಾಸದ ಸಂದರ್ಭದಲ್ಲಿ ಅವಘಡ ಉಂಟಾದರೆ ಮುಖ್ಯಸ್ಥರು ನೇರ ಹೊಣೆಗಾರರಾಗಿರುತ್ತಾರೆ. ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಹೇಳಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ