LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಜ್ಜಿಯ ಕೊಲೆ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧನ!

ಶಿವಮೊಗ್ಗ, ಜುಲೈ 2: ಗಾಂಜಾ ಅಮಲಿನಲ್ಲಿ ತನ್ನ ಅಜ್ಜಿಯನ್ನೇ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಯುವಕನನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಪರಿಣಾಮ, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ಗುರುವಾರ ನಡೆದಿದೆ.

ಬಂಧಿತನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಗಾಂಜಾ ಸೇವನೆ ಹಾಗೂ ಮಾರಾಟದಲ್ಲಿ ತೊಡಗಿದ್ದ ಕಿಶೋರ್ ವಿರುದ್ಧ ದೂರು ನೀಡಲು ಅಜ್ಜಿ ಸುಶೀಲಮ್ಮ ಮುಂದಾಗಿದ್ದರು. ಇದರಿಂದ ಆಕ್ರೋಶಗೊಂಡ ಕಿಶೋರ್, ಅಜ್ಜಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಲು ಮುಂದಾದಾಗ, ಆತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಮಾತು ಕೇಳದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡರು.

ಘಟನೆಯಲ್ಲಿ ಗಾಯಗೊಂಡಿರುವ ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ನಗರ ಹೊರವಲಯದ ವಾಜಪೇಯಿ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಳ್ನಾವರ ಅಂಜುಮನ್-ಎ-ಇಸ್ಲಾಂ ನೂತನ ಆಡಳಿತ ಮಂಡಳಿ ರಚನೆಗೆ ಜುಲೈ 10ರಂದು ಮಹತ್ವದ ಸಭೆಬೆಳಗಾವಿಯ ಸೇಂಟ್ ಪಾಲ್ಸ್ ಶಾಲೆಯ 170ನೇ ವಾರ್ಷಿಕೋತ್ಸವಕ್ಕೆ ಆಗಮಿಸಲಿದ್ದಾರೆ ಮುಖ್ಯಮಂತ್ರಿಅಜ್ಜಿಯ ಕೊಲೆ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧನ!ರೈಲಿನಲ್ಲಿ ಭಿಕ್ಷಾಟನೆ, ಧೂಮಪಾನ, ಅನಧಿಕೃತ ವ್ಯಾಪಾರಕ್ಕೆ ಭಾರಿ ದಂಡ!ಬಸ್‌ ಕಿಟಕಿಯಿಂದ ಉಗುಳಲು ತಲೆ ಹೊರಹಾಕಿದ ವಿದ್ಯಾರ್ಥಿಯ ರುಂಡ–ಮುಂಡ ಬೇರ್ಪಟ್ಟು ದಾರುಣ ಸಾವುಜೂನ್‌ನಲ್ಲಿ ಜಿಎಸ್‌ಟಿ ಸಂಗ್ರಹ ₹1.95 ಲಕ್ಷ ಕೋಟಿ; 14% ಏರಿಕೆಬೇರೆ ರಾಜ್ಯಗಳಲ್ಲಿ ಆದಂತೆ ರಾಜ್ಯದಲ್ಲಿ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಿ: ಪರಮೇಶ್ವರದಪ್ಪಗಿದ್ದಾಳೆ ಎಂದು ಪತ್ನಿಯ ಕತ್ತು ಹಿಸುಕಿ ಕೊಂದ ಪತಿ!ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿಯಿಂದ ಸಂಘರ್ಷ ಸೃಷ್ಟಿಗೆ ಯತ್ನ : ಬಿ.ಕೆ.ಹರಿಪ್ರಸಾದ ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ: ಹೊಸ ದಾಖಲೆ ಬರೆದ ವಿಟಿಯು