LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಾವೇರಿ ವೈದ್ಯಕೀಯ ಕಾಲೇಜಿಗೆ ಕನಕದಾಸರ ಹೆಸರು

ಹಾವೇರಿ, ನ. 27: ಹಾವೇರಿ ವೈದ್ಯಕೀಯ ಕಾಲೇಜಿಗೆ ಭಕ್ತ ಕನಕದಾಸರ ಹೆಸರಿಡುವುದಾಗಿ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಘೋಷಿಸಿದರು.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀಗಳ ಮನವಿಯಂತೆ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ತಿಳಿಸಿದರು.

ಕನಕದಾಸರ ಐಕ್ಯಸ್ಥಳದ ದರ್ಶನ ಪಡೆದು, ಅವರ ಜಯಂತಿ ಆಚರಣೆಯಲ್ಲಿ ಭಾಗವಹಿಸಿರುವುದು ನನ್ನ ಪುಣ್ಯ. ಸುಮಾರು 500 ವರ್ಷಗಳ ಹಿಂದೆ ಶ್ರೀಕೃಷ್ಣ ಕನಕದಾಸರಿಗೆ ದರ್ಶನ ನೀಡಿದ ಘಟನೆಯು ಭಕ್ತಿಯ ಶಕ್ತಿಗೆ ಸಾಕ್ಷಿಯಾಗಿದೆ. ಕನಕದಾಸರು ಕೇವಲ ದಾಸ ಸಾಹಿತ್ಯದ ಮಹನೀಯರಲ್ಲ, ಕನ್ನಡ ನಾಡಿನ ಹೆಮ್ಮೆ ಹಾಗೂ ಅಮೂಲ್ಯ ರತ್ನವಾಗಿದ್ದಾರೆ. ಅವರ ಕೀರ್ತನೆಗಳು ಮತ್ತು ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮನಸ್ಸು ನಿರ್ಮಲವಾಗಬೇಕಾದರೆ ಮಹನೀಯರ ಸಂದೇಶಗಳನ್ನು ಜೀವನದಲ್ಲಿ ಪಾಲಿಸಬೇಕು. ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ದೇವನೊಬ್ಬ, ನಾಮ ಹಲವು ಎಂಬ ಸಂದೇಶದ ಮೂಲಕ ಸಮಾಜವನ್ನು ಒಗ್ಗೂಡಿಸಿದ ಮಹನೀಯರಾಗಿದ್ದಾರೆ ಎಂದು ಸ್ಮರಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಯಾರೂ ಹಸಿವಿನಿಂದ ಬಳಲಬಾರದು ಎಂಬ ಸಂಕಲ್ಪದೊಂದಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ಬೆಲೆ ಏರಿಕೆ ಹಾಗೂ ಜನರ ಆದಾಯ ಕುಸಿತದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರಿಗೆ ಆಸರೆಯಾಗಿವೆ. ಕನಕದಾಸರು 500ರಿಂದ 600 ವರ್ಷಗಳ ಹಿಂದೆಯೇ ರಾಗಿ ಶ್ರೇಷ್ಠ ಧಾನ್ಯವೆಂದು ಸಾರಿದ್ದರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಸರ್ಕಾರಿ ಶಾಲೆ ಮಕ್ಕಳಿಗೆ ಮೀಸಲಾತಿ

ಹಾವೇರಿ ವೈದ್ಯಕೀಯ ಕಾಲೇಜಿನ ಉದ್ಘಾಟನೆಗೆ ತಾವು ಆಗಮಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿ, ಕನಕದಾಸರ ಹೆಸರು ಶಾಶ್ವತವಾಗಿ ಉಳಿಯಬೇಕೆಂಬ ಉದ್ದೇಶದಿಂದ ಕಾಲೇಜಿಗೆ ಅವರ ಹೆಸರಿಡಲಾಗುವುದು. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ. 7.5ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

130 ಕೆರೆಗಳಿಗೆ ನೀರು

ಹಾವೇರಿ ಜಿಲ್ಲೆಯ 130 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಕಾಗಿನೆಲೆಯ ಸಮಗ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸುವ ಚಿಂತನೆಯೂ ನಡೆದಿದೆ. ಜಿಲ್ಲೆಯ ಜನರು 6 ಶಾಸಕರನ್ನು ಆಯ್ಕೆ ಮಾಡುವ ಮೂಲಕ ಸರ್ಕಾರಕ್ಕೆ ಶಕ್ತಿ ನೀಡಿದ್ದಾರೆ. ಸಮಾಜವನ್ನು ಒಗ್ಗೂಡಿಸಿ ಮುನ್ನಡೆಸುವ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST