LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟ

ಬೆಂಗಳೂರು, ಜುಲೈ 17: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಆತಂಕವೂ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ವರದಿಯ ಆಧಾರದ ಮೇಲೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುಂದಿನ ಮೂರು ದಿನಗಳ ಮಳೆ ಮತ್ತು ಹವಾಮಾನ ಮುನ್ಸೂಚನೆಯನ್ನು ಪ್ರಕಟಿಸಿದೆ. ಅದರಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಜುಲೈ 17 ಮತ್ತು 18ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಶುಕ್ರವಾರ ಸಂಜೆದಿಂದ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದೇ ವೇಳೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19ರಂದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಜುಲೈ 18ರಂದು ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ ಘೋಷಿಸಲಾಗಿದೆ.

ನದಿ, ಹೊಳೆ ಮತ್ತು ತಗ್ಗು ಪ್ರದೇಶಗಳ ಸಮೀಪ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯುವ ಮುನ್ನ ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಹಾಗೂ ಅಗತ್ಯವಿಲ್ಲದ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ