LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಗಣಿ ಇಲಾಖೆಯಲ್ಲಿ ಭಾರೀ ವರ್ಗಾವಣೆ; 160 ಅಧಿಕಾರಿಗಳಿಗೆ ಸ್ಥಳಾಂತರ

ಬೆಂಗಳೂರು, ಜುಲೈ 20: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಭಾರೀ ಶಾಕ್ ನೀಡಿದ್ದು, ಒಟ್ಟು 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪ ನಿರ್ದೇಶಕರು ಸೇರಿದ್ದಾರೆ. ಇಲಾಖೆಯ ಸುಮಾರು ಶೇ.80ರಷ್ಟು ಸಿಬ್ಬಂದಿಯನ್ನು ಒಂದೇ ಆದೇಶದಲ್ಲಿ ವರ್ಗಾವಣೆ ಮಾಡಲಾಗಿದೆ.

ದೀರ್ಘಕಾಲದಿಂದ ಸ್ವಂತ ಜಿಲ್ಲೆ ಅಥವಾ ನೆರೆಯ ಜಿಲ್ಲೆಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಸ್ಥಳೀಯ ಮಟ್ಟದ ಏಕಸ್ವಾಮ್ಯಕ್ಕೆ ಕಡಿವಾಣ ಹಾಕುವುದು, ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಆಡಳಿತಾತ್ಮಕ ಸುಧಾರಣೆ ತರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ವರ್ಗಾವಣೆಯಾದ ಅಧಿಕಾರಿಗಳು ಕೂಡಲೇ ಹೊಸ ಕರ್ತವ್ಯ ಸ್ಥಳಕ್ಕೆ ಹಾಜರಾಗಿ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಆದೇಶಿಸಲಾಗಿದೆ.

ಜುಲೈ 1ರಂದು ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸೂಚನೆಯ ಮೇರೆಗೆ ಈ ಆಡಳಿತಾತ್ಮಕ ಬದಲಾವಣೆ ಜಾರಿಗೆ ಬಂದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ