LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ ತಡೆಯಾಜ್ಞೆ

ಬೆಂಗಳೂರು, ಮೇ 19 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ರಾಜ್ಯವ್ಯಾಪಿ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದ್ದ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾ. ಸೂರಜ್‌ ಗೋವಿಂದರಾಜ್‌ ಹಾಗೂ ನ್ಯಾ. ಡಾ. ಕೆ. ಮನ್ಮಥ ರಾವ್‌ ಅವರ ರಜಾಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ ನಡೆಸಿತು.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. ವೇತನ ಪರಿಷ್ಕರಣೆ, ಬಾಕಿ ವೇತನ ಬಿಡುಗಡೆ, ನೌಕರರ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಜಂಟಿ ಕ್ರಿಯಾ ಸಮಿತಿ ಹೋರಾಟ ಘೋಷಿಸಿತ್ತು.

ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುವ ಸಾಧ್ಯತೆ ಇರುವುದನ್ನು ಅರ್ಜಿದಾರರು ನ್ಯಾಯಪೀಠದ ಗಮನಕ್ಕೆ ತಂದರು. ವಿದ್ಯಾರ್ಥಿಗಳು, ನೌಕರರು, ಗ್ರಾಮೀಣ ಭಾಗದ ಪ್ರಯಾಣಿಕರು ಹಾಗೂ ತುರ್ತು ಸೇವೆಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಮುಷ್ಕರ ತಡೆಯುವಂತೆ ಮನವಿ ಮಾಡಲಾಗಿತ್ತು.

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಅವರು, ಸಾರಿಗೆ ಸಚಿವರು ಅಥವಾ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮಾತುಕತೆ ನಡೆಸುವ ಬಗ್ಗೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸಲು 2 ದಿನಗಳ ಕಾಲಾವಕಾಶ ಕೋರಿದರು.

 

ಇದನ್ನು ಪರಿಗಣಿಸಿದ ನ್ಯಾಯಪೀಠ, ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ಯಾವಾಗ ನಡೆಯಲಿದೆ ಎಂಬುದನ್ನು ಗುರುವಾರದೊಳಗೆ ತಿಳಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು. ಅಲ್ಲದೆ, ಮೇ 20ರಿಂದ ಘೋಷಿಸಲಾಗಿದ್ದ ಮುಷ್ಕರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ