LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನ : ಯಥಾಸ್ಥಿತಿ ಕಾಪಾಡಲು ಹೈಕೋರ್ಟ ಆದೇಶ 

ಬೆಂಗಳೂರು : ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಹೈಕೋರ್ಟ​ ಆದೇಶ ನೀಡಿದೆ.



ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸಂಪುಟ ನಿರ್ಧರಿಸಿತ್ತು.



ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ ಗೌಸ್ ಮೊಹಿಯುದ್ದೀನ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.



ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಅಗಸ್ಟ 19 ರಂದು ಸುತ್ತೋಲೆ ಸಹ ಹೊರಡಿಸಿತ್ತು.



ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ಸರ್ಕಾರ ನೀಡಿತ್ತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ