LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಸುಲಿಗೆ ಯತ್ನ ಆರೋಪ; ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷನ ಬಂಧನ

ಮಂಗಳೂರು: ಚಿನ್ನ ಮತ್ತು ನಗದು ಬೇಡಿಕೆ ಈಡೇರದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.



ಕೋವೂರು ನಿವಾಸಿ ಸುರೇಶ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಮತ್ತು ಪವಿತ್ರನ್ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ ಮಾಡಲು ನಿರ್ಧರಿಸಿದ್ದೇವು. ಪವಿತ್ರನ್ ಅವರ ಸಂಶಯಾಸ್ಪದ ವ್ಯಾಪಾರ ವ್ಯವಹಾರಗಳ ಬಗ್ಗೆ ಹೆಚ್ಚು ತಿಳಿದುಕೊಂಡ ನಂತರ, ತಾವು ಅವರೊಂದಿಗಿನ ಪಾಲುದಾರಿಕೆಯಿಂದ ಹೊರಗುಳಿರುವುದಾಗಿ ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಪವಿತ್ರನ್, ಸುರೇಶ ಅವರ ಲ್ಯಾಪ್‌ಟಾಪ್ ಅನ್ನು ರಹಸ್ಯವಾಗಿ ಕಿತ್ತುಕೊಂಡು, ಚಿನ್ನ ಮತ್ತು ನಗದು ಬೇಡಿಕೆಗೆ ಮಣಿಯದಿದ್ದರೆ ಕಂಪ್ಯೂಟರ್‌ನಲ್ಲಿರುವ ಅವರ ಖಾಸಗಿ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.



ಪವಿತ್ರನ್ ತಮ್ಮ ಕೈ ಕಾಲುಗಳನ್ನು ಕತ್ತರಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ