ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಲ್ಲೆಯ ಕೆಲ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಣೆ

ಬೆಳಗಾವಿ, ಜು.25 : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.