ಹುಬ್ಬಳ್ಳಿ: ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಪುನಾರಂಭ ಆಗಿದೆ. ಇಂದಿನಿಂದ ಹುಬ್ಬಳ್ಳಿ-ದೆಹಲಿ ದೈನಂದಿನ ವಿಮಾನ ಸೇವೆ ಆರಂಭಗೊಂಡಿದ್ದು, ಹುಬ್ಬಳ್ಳಿ-ದೆಹಲಿ ವಿಮಾನ ಸೇವೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
https://twitter.com/JoshiPralhad/status/1592118875923288065?t=f--EzE8SmhCH19TPJ-qaAg&s=19
ಈಗಾಗಲೇ ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಆರಂಭವಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜೋಶಿ ಮನವಿ ಮಾಡಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಪ್ರಮೋದ ಠಾಕ್ರೆ, ಇಂಡಿಗೋ ವಿಮಾನ ಸೇವೆ ಆರಂಭದ ಪೂರ್ವದಲ್ಲಿ ವಿಮಾನದ ತಾಂತ್ರಿಕ ಸ್ಥಿತಿ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದರು.








