ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಹೇಳಿಕೆಗೆ ಡಿಕೆಶಿ ಆಕ್ಷೇಪ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮೊದಲು ಸಿ.ಟಿ.ರವಿ ವಿರುದ್ಧ ಕೇಸ್ ದಾಖಲಿಸಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ,ಶಿವಕುಮಾರ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ? ರಾಜ್ಯದಲ್ಲಿ ಅಶಾಂತಿ ಮೂಡಿಸಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿ ನಾಯಕರು ಹಳ್ಳಿಗಳಲ್ಲಿ ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.