ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಕ್ಷ ಒಪ್ಪಿದರೆ ಕೋಲಾರದಿಂದ ಸ್ಪರ್ಧೆ - ಸಿದ್ದರಾಮಯ್ಯ ಘೋಷಣೆ

ಕೋಲಾರ:  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿರುವ ಕ್ಷೇತ್ರವನ್ನು ಬಹಿರಂಗಪಡಿಸಿದ್ದು, ಕೋಲಾರದಿಂದಲೇ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಸೋಮವಾರ ನಗರದ ಮಿನಿ ಕ್ರೀಡಾಂಗಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದು ಆದರೆ ಪಕ್ಷದ ನಿರ್ಧಾರ ಅಂತಿಮವಾಗಲಿದೆ ಎಂದರು.

ಸಿದ್ದರಾಮಯ್ಯ ಹೊರಗಿನವರು. ಅವರು ಇಲ್ಲಿ ಬರುವುದಿಲ್ಲ, ಜನರ ಕಷ್ಟ ಸುಖ ಕೇಳುವುದಿಲ್ಲ ಎಂದು ಅಪಪ್ರಚಾರ ಮಾಡುತ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಸಿದ್ದರಾಮಯ್ಯ ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.