LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಹುಬ್ಬಳ್ಳಿ, ದಾವಣಗೆರೆಯಲ್ಲಿಯೂ ಮತದಾರ ಪಟ್ಟಿ ಅಕ್ರಮ ಬೆಳಕಿಗೆ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆ ಮುಖ್ಯಸ್ಥರಾದ ರವಿಕುಮಾರ, ಕೆಂಪೇಗೌಡ, ರೇಣುಕಾಪ್ರಸಾದ, ಹೆಚ್.ಆರ್.ಧರ್ಮೇಶ ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳು. ಅಕ್ರಮದ ಬಗ್ಗೆ ತನಿಖೆ ಚುರುಕುಗೊಳಿಸುತ್ತಿದ್ದಂತೆ ಹುಬ್ಬಳ್ಳಿ, ದಾವಣಗೆರೆ, ಕನಕಗಿರಿಯಲ್ಲಿಯೂ ವೋಟರ್ ಐಡಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.



ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆ ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 6 ತಿಂಗಳ ಹಿಂದೆಯೇ ಮತದಾರರ ಮಾಹಿತಿ ಸಂಗ್ರಹಿಸಿ ಸ್ಮಾರ್ಟ ಸಿಟಿ ವಿಭಾಗದ ಹೆಸರಲ್ಲಿ ಅಕ್ರಮ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.



ಕನಕಗಿರಿ ಕ್ಷೇತ್ರದಲ್ಲಿ ಸುಮಾರು 9 ಸಾವಿರ ಮತದಾರರ ಸಂಖ್ಯೆ ಕಡಿಮೆಯಾಗಿದ್ದು ಬಿಜೆಪಿ ಸೋಲಿನ ಭೀತಿಯಲ್ಲಿ ಈ ರೀತಿ ಮಾಡುತ್ತಿದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ದೂರಿದ್ದಾರೆ. ಇನ್ನು ದಾವಣಗೆರೆಯಲ್ಲಿ ಮತದಾರರ ಪಟ್ಟಿಯಿಂದ 1718 ಜನರ ಹೆಸರೇ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಫಾರ್ಮ ನಂ.7 ಭರ್ತಿ ಮಾಡದೇ ಮತದಾರರ ಪಟ್ಟಿಯಿಂದಲೇ ಹೆಸರನ್ನು ಕೈಬಿಡಲಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ