ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಾಲಕ್ಕಿ ಕಂಪಿನ ನಗರಕ್ಕೆ ಸಿಎಂ ಆಗಮನದ ಹಿನ್ನಲೆಯಲ್ಲಿ ಮುಖ್ಯ ರಸ್ತೆ ಡಿವೈಡರಗಳಿಗೆ ಬಣ್ಣ ಬಳಿಯುವ ಕಾರ್ಯ ಚುರುಕು.

ಹಾವೇರಿ: ಇದೇ ಜ. 7ರಂದು ಹಾವೇರಿನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರವನ್ನು ಸ್ವಚ್ಛಗೊಳಿಸಿ, ಸುಣ್ಣ-ಬಣ್ಣಗಳನ್ನು ಬಳೆದು ನಗರದ ಸೌಂದರ್ಯೀಕರಣವನ್ನು ಹೆಚ್ಚಿಸಲಾಗುತ್ತಿದೆ. ಸರಿಸುಮಾರು 500 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮೆಡಿಕಲ್ ಕಾಲೇಜು ಕಟ್ಟಡ ಸೇರಿದಂತೆ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಹಲವು ಸಚಿವರು, ಕೇಂದ್ರದ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಳೆಯ ಪಿಬಿ ರಸ್ತೆಯ ಅಂದವನ್ನು ದ್ವಿಗುಣ ಪಡಿಸಲಾಗುತ್ತಿದೆ. ರಸ್ತೆಗಳಲ್ಲಿ ತುಂಬಿದ್ದ ಧೂಳನ್ನು ಕಾರ್ಮಿಕರು ಕಳೆದ ಕೆಲವು ದಿನಗಳಿಂದ ಸ್ವಚ್ಛ ಗೊಳಿಸಿ,ರಸ್ತೆ ಮಧ್ಯೆ ಡಿವೈಡರ್‌ ಬಣ್ಣ ಬಳಿಯುತ್ತಿದ್ದಾರೆ. ಅವೈಜ್ಞಾನಿಕ ಕಾಮಗಾರಿಗಳಿಂದ ರಸ್ತೆ ಪಕ್ಕ ಬಿದ್ದ ತೆಗ್ಗು-ಗುಂಡಿಗಳನ್ನು ತಾತ್ಕಾಲಿಕವಾಗಿ ಡಾಂಬರು ಹಾಕಿ ಮುಚ್ಚಲಾಗುತ್ತಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.