ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟಿಳಕವಾಡಿ ರೇಲ್ವೆ ಗೇಟ್ ಮೇಲ್ಸೇತುವೆ ಉದ್ಘಾಟನೆ

ಬೆಳಗಾವಿ, ಅ. 12- ಬೆಳಗಾವಿಯ ಟಿಳಕವಾಡಿಯ ಮೂರನೇ ರೇಲ್ವೆ ಗೇಟ್ ಮೇಲೆ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ಬುಧವಾರ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು, ನೈರುತ್ಯ ರೈಲ್ವೆ ವಲಯದಿಂದ ಲೆವೆಲ್ ಕ್ರಾಸಿಂಗ್ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಜಿ ಸಂಸದ ಸುರೇಶ ಅಂಗಡಿ ಅವರ ಕನಸಾಗಿತ್ತು. ಜನ ಸಂಚಾರಕ್ಕೆ ಅಡಚಣೆ ಆಗುತ್ತಿರುವ ಕಾರಣ ಸುಮಾರು 18 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನುಳಿದ ರೈಲ್ವೆ ಗೇಟ್ ಗಳಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗುವದು ಎಂದು ತಿಳಿಸಿದರು.

2023 ರ ವೇಳೆಗೆ ಡಬಲ್ ಲೈನ್ ರೈಲ್ವೆ ಮಾರ್ಗ ನಿರ್ಮಾಣ ಮುಕ್ತಾಯ ಆಗಲಿದೆ. ಅದೇ ರೀತಿಯಲ್ಲಿ ವಿಮಾನ ನಿಲ್ದಾಣಕ್ಕೆ ಸಮನಾಗಿ ಬೆಳಗಾವಿಯ ರೈಲ್ವೆ ನಿಲ್ದಾಣ ಈಗಾಗಲೇ ನಿರ್ಮಾಣ ಮಾಡಲಾಗಿದೆ. ರೈಲ್ವೆ ಅಧಿಕಾರಿಗಳ ನೀಡಿದ ಮಾಹಿತಿಯ ಅನ್ವಯ ಶೀಘ್ರದಲ್ಲೇ ಬೆಳಗಾವಿಯ ಹೊಸ ರೈಲ್ವೆ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದ ಕಡಾಡಿ ಅವರು ತಿಳಿಸಿದರು.

ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 381ರ ರಸ್ತೆ ಮೇಲ್ ಸೇತುವೆ ನಿರ್ಮಾಣದಿಂದ ಸ್ಥಳೀಯ ಹಾಗೂ ಬೃಹತ್ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಅನುಕೂಲವಾಗಲಿದೆ. ರೈಲ್ವೆ ಹಳಿಗಳ ಬಳಿ ವಾಹನ ಪ್ರವೇಶ ಕೂಡ ಕಡಿಮೆಯಾಗಲಿವೆ ಇದರಿಂದ ಅಪಘಾತ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ ಎಂದು ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಈ ಸಂದರ್ಭದಲ್ಲಿ ಹೇಳಿದರು.

ಶಾಲಾ ಮಕ್ಕಳು, ಕಚೇರಿ ಕೆಲಸಕ್ಕೆ ಹೋಗುವವರು, ಖಾನಾಪುರ, ಮಚ್ಚೆ, ಪೀರನವಾಡಿ ಸೇರಿದಂತೆ ಸ್ಥಳೀಯ ಭಾಗದ ವಾಹನ ಸವಾರರಿಗೆ ರೈಲ್ವೆ ಗೇಟ್ ಕ್ರಾಸ್ ಮಾಡಿ ಹೋಗಲು ತೊಂದರೆ ಇತ್ತು. ಈ ಸೇತುವೆ ನಿರ್ಮಾಣದಿಂದ ವಾಹನ ಸಂಚಾರರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಯಿತು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ತಿಳಿಸಿದರು.

ಈಗಾಗಲೇ ರೈಲ್ವೆ ಡಬಲ್ ರೈಲು ರಸ್ತೆಗಳಾಗಿವೆ. ನಗರದ ರೈಲ್ವೆ ಗೇಟ್ ಇರುವ ಎಲ್ಲಾ ಭಾಗಗಳಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು. ಇದರಿಂದ ಟ್ರಾಫಿಕ್ ಸಮಸ್ಯೆ ಸಹ ಕಡಿಮೆ ಆಗುವುದು ಎಂದು ಅನಿಲ ಬೆನಕೆ ತಿಳಿಸಿದರು.

ವೇದಿಕೆ ಕಾರ್ಯಕ್ರಮದ ಬಳಿಕ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 381ರ ಬದಲಿಗೆ (ಟಿಳಕ ವಾಡಿ ಸಂಖ್ಯೆ 3) ರಸ್ತೆ ಮೇಲ್ಸೇತುವೆ ಶೀಲಾಫಲಕ ಅನಾವರಣ ಗೊಳಿಸಲಾಯಿತು. ಸಂಸದೆ ಮಂಗಳಾ ಅಂಗಡಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಮೇಲ್ಸೇತುವೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.