LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿಜ್ಞಾನ ಸಮ್ಮೇಳನಕ್ಕೆ ಮಕ್ಕಳ ಭಾಗವಹಿಸುವಿಕೆ ಹೆಚ್ಚಿಸಿ : ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, ನ. 16: ನಗರದ ಸಿಪಿಇಡಿ ಮೈದಾನದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ನಡೆಯಲಿರುವ ಆರನೇ ರಾಜ್ಯಮಟ್ಟದ ವಿಜ್ಞಾನ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಕುತೂಹಲ ಹಾಗೂ ಸಂಶೋಧನಾ ಮನೋಭಾವ ಬೆಳೆಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಜ್ಞಾನದ ಹೊಸ ಆವಿಷ್ಕಾರಗಳು ಹಾಗೂ ವೈಜ್ಞಾನಿಕ ಬೆಳವಣಿಗೆಗಳನ್ನು ತಿಳಿದುಕೊಳ್ಳಲು ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಬೇಕು ಎಂದರು.

ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಸಮ್ಮೇಳನಕ್ಕೆ ಕರೆತರಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಗ್ರಾಮ ಪಂಚಾಯಿತಿಗಳ ಮೂಲಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಖಾಸಗಿ ಶಾಲೆಗಳು ತಮ್ಮ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ನಿರ್ದೇಶಿಸಿದರು.

ಬೆಳಗಾವಿ ನಗರ ವ್ಯಾಪ್ತಿಯ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮ್ಮೇಳನದಲ್ಲಿ ಭಾಗವಹಿಸುವಂತೆ ಸಂಬಂಧಿಸಿದ ಇಲಾಖೆಗಳು ಕ್ರಮ ವಹಿಸಬೇಕು. ಸಮ್ಮೇಳನ ನಡೆಯುವ ಸ್ಥಳದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಮುಂಚಿತವಾಗಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಇಲಾಖೆಗಳ ಮಳಿಗೆಗಳೊಂದಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ತೊಡಗಿರುವ ಖಾಸಗಿ ಸಂಸ್ಥೆಗಳಿಗೂ ಮಳಿಗೆ ಸ್ಥಾಪಿಸಲು ಅವಕಾಶ ಕಲ್ಪಿಸಬೇಕು. ಸಮ್ಮೇಳನದ ಸಭಾಧ್ಯಕ್ಷರನ್ನು ಮೆರವಣಿಗೆಯ ಮೂಲಕ ಸ್ವಾಗತಿಸಲು ಜಾನಪದ ಕಲಾ ತಂಡಗಳನ್ನು ನಿಯೋಜಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾತನಾಡಿ, ಸಮ್ಮೇಳನದ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರ ವಿವರಗಳನ್ನು ಮುಂಚಿತವಾಗಿ ಒದಗಿಸಿದರೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ ಹಾಗೂ ವೈಚಾರಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಸಮ್ಮೇಳನ ಆಯೋಜಿಸಲಾಗುತ್ತಿದೆ. 2021ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಆರನೇ ಸಮ್ಮೇಳನಕ್ಕೆ ಬೆಳಗಾವಿ ಆತಿಥ್ಯ ವಹಿಸಲಿದೆ ಎಂದು ತಿಳಿಸಿದರು.

ಮೂರು ದಿನಗಳ ಸಮ್ಮೇಳನದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ವಿವಿಧ ಗೋಷ್ಠಿಗಳು ನಡೆಯಲಿದ್ದು, ಹಿರಿಯ ವಕೀಲ ಪ್ರೊ. ರವಿವರ್ಮ ಅವರು ಸಮ್ಮೇಳನದ ಸಭಾಧ್ಯಕ್ಷರಾಗಿರುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ, ಶಾಸಕ ಆಸಿಫ್ ಸೇಠ್, ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಅಮ್ರಿತ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಆದಿ ಉಪಸ್ಥಿತರಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST