ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್ ಸಿ - ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳ

ಬೆಂಗಳೂರು: ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡ ಮೀಸಲಾತಿ ಶೇ.3 ರಿಂದ ಶೇ.7ಕ್ಕೆ ಏರಿಕೆಗೆ ಸರ್ವ ಸಮ್ಮತ ನಿರ್ಣಯ ಮಾಡಲಾಗಿದೆ ಎಂದು ಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳಿಗೆ ಮೀಸಲಾತಿ ಹೆಚ್ಚಿಸೋ ಐತಿಹಾಸಿಕ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ವಂದನೆಗಳು. ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ನ್ಯಾಯ ಸಮ್ಮತ ವರದಿ ಅನುಷ್ಠಾನಕ್ಕೆ ಸರ್ಕಾರ ನಿರ್ಧಾರ ಎಂದು ಹೇಳಿದ್ದಾರೆ.

ಇಂದು ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸರ್ವಪಕ್ಷಗಳ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಮಾತನಾಡಿದಂತ ಅವರು, ಮೊನ್ನೆ ನಡೆದಂತ ಅಧಿವೇಶನದಲ್ಲಿ ಹೇಳಿದಂತೆ ಸರ್ವಪಕ್ಷಗಳ ಸಭೆ ಕರೆದು, ಬಹಳ ವರ್ಷದ ಬೇಡಿಕೆ, ನ್ಯಾಯ ಸಮ್ಮತವಾದಂತ ಬೇಡಿಕೆ. ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆ ಆಧರಿಸಿ ಮೀಸಲಾತಿ ಹೆಚ್ಚಿಸುವಂತೆ, ಎಸ್ಸಿ, ಎಸ್ಟಿ ಸಮುದಾಯದವರ ಬೇಡಿಕೆಯ ಬಗ್ಗೆ ಚರ್ಚಿಸಲಾಯಿತು ಎಂದರು.

ನಾಗಮೋಹನ ದಾಸ್ ಸಮಿತಿಯನ್ನು ಮೀಸಲಾತಿ ಹೆಚ್ಚಿಸೋ ಸಂಬಂಧ ರಚಿಸಲಾಗಿತ್ತು. ಮತ್ತೆ ಆರು ತಿಂಗಳ ಕಾಲಾವಕಾಶ ಕೇಳಿದ್ದ ಕಾರಣ, ಅದರಂತೆ ಮೀಸಲಾತಿ ಹೆಚ್ಚಳದ ಸಂಬಂಧ ಅಧ್ಯಯನಕ್ಕೆ ಅವಕಾಶ ನೀಡಲಾಗಿತ್ತು.

ಸಮಿತಿಯು ವರದಿಯನ್ನು ನೀಡಿದೆ. ಆ ಬಳಿಕ ಸುಪ್ರೀಂ ಕೋರ್ಟ್ ತೀರ್ಪು ಕೂಡ ಮೀಸಲಾತಿ ಹೆಚ್ಚಳ ಸಂಬಂಧ ಬಂದಿತ್ತು. ಈ ಬಗ್ಗೆಯೂ ಸಮಿತಿ ರಚನೆ ಮಾಡಿ, ಅದರಿಂದಲೂ ಸಲಹೆ ಪಡೆಯಲಾಯಿತು ಎಂದು ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.