ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೇ.15ರಷ್ಟು ವೇತನ ಹೆಚ್ಚಳ ತಿರಸ್ಕರಿಸಿ 21ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ

ಬೆಂಗಳೂರು: ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ಶೇ.20ಕ್ಕಿಂತ ಕಡಿಮೆ ವೇತನ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ. ಸರಕಾರ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದು ನ್ಯಾಯಸಮ್ಮತವಲ್ಲ. ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ. ವೇತನ ಹೆಚ್ಚಳ ಸಂಬಂಧ ಯಾವುದೇ ಅಧಿಕೃತ ಆದೇಶಗಳು ಬಂದಿಲ್ಲ. ಈ ಕುರಿತ ವಿವರಗಳೂ ನಮಗೆ ಸಿಕ್ಕಿಲ್ಲ. ಕಾರಣ ಈ ಹಿಂದೆ ನಿರ್ಧರಿಸಿದಂತೆ ಮಾರ್ಚ 21 ರಿಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಪ್ರಕಟಣೆ ನೀಡಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.