LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಚಿನ್ನದ ಸಂಭ್ರಮ: ಪ್ರೀತಿ ಪವಾರ, ಜೈಸ್ಮಿನ್‌ಗೆ ಚಿನ್ನ

ಗ್ಲಾಸ್ಗೋ, ಆಗಸ್ಟ್ 1: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್‌ಗಳಾದ ಪ್ರೀತಿ ಪವಾರ ಮತ್ತು ಜೈಸ್ಮಿನ್ ಲಂಬೋರಿಯಾ ಚಿನ್ನದ ಪದಕ ಗೆದ್ದು ಭಾರತದ ಪದಕ ಬೇಟೆಗೆ ಮತ್ತಷ್ಟು ಮೆರುಗು ತಂದಿದ್ದಾರೆ. ಈ ಎರಡು ಚಿನ್ನದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಮಹಿಳೆಯರ 54 ಕೆಜಿ ವಿಭಾಗದ ಫೈನಲ್‌ನಲ್ಲಿ ಪ್ರೀತಿ ಪವಾರ ಕೆನಡಾದ ಡೆಲ್ಗಾಡೊ ಸವನ್ನಾ ವಿರುದ್ಧ ಆರಂಭದಿಂದಲೇ ಸಂಪೂರ್ಣ ಪ್ರಾಬಲ್ಯ ಸಾಧಿಸಿ 5-0 ಅಂತರದ ಏಕಪಕ್ಷೀಯ ಗೆಲುವು ದಾಖಲಿಸಿದರು. ಇದರೊಂದಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಮ್ಮ ಚೊಚ್ಚಲ ಪದಕವನ್ನೇ ಚಿನ್ನವನ್ನಾಗಿ ಪರಿವರ್ತಿಸಿದರು.

ಇನ್ನೊಂದೆಡೆ, ಮಹಿಳೆಯರ 57 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ಜೈಸ್ಮಿನ್ ಲಂಬೋರಿಯಾ ಉತ್ತರ ಐರ್ಲೆಂಡ್‌ನ ಅನುಭವಿ ಬಾಕ್ಸರ್ ಮೈಕೆಲಾ ವಾಲ್ಶ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ರೋಚಕ ಹಣಾಹಣಿಯಲ್ಲಿ ಆತ್ಮವಿಶ್ವಾಸದ ಆಟವಾಡಿದ ಜೈಸ್ಮಿನ್ ಭಾರತಕ್ಕೆ ಮತ್ತೊಂದು ಅಮೂಲ್ಯ ಚಿನ್ನದ ಪದಕ ತಂದುಕೊಟ್ಟರು.

ಈ ಎರಡು ಚಿನ್ನದ ಪದಕಗಳೊಂದಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 27ಕ್ಕೆ ತಲುಪಿದ್ದು, ಪದಕ ಪಟ್ಟಿಯಲ್ಲಿ ಭಾರತದ ಸ್ಥಾನ ಮತ್ತಷ್ಟು ಬಲಗೊಂಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ