ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೋವಿಡ್ ಭೀತಿ; ಭಾರತ ಜೋಡೋ ಯಾತ್ರೆ ಮುಂದೂಡಿ‌ ಎಂದ ಕೇಂದ್ರ ಸಚಿವ

ಹೊಸದಿಲ್ಲಿ: ಕೋವಿಡ್‌ ನಿಯಮವನ್ನು ಪಾಲಿಸಲು ಆಗದಿದ್ದರೆ ಭಾರತ ಜೋಡೋ ಯಾತ್ರೆಯನ್ನು ಮುಂದೂಡಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ  ಮಾಂಡವಿಯಾ ಅವರು ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಕೋವಿಡ್‌ ನಿಯಮವನ್ನು ಕಟ್ಟುನಿಟ್ಟಾಗಿ ಯಾತ್ರೆಯಲ್ಲಿ ಪಾಲಿಸಿ. ಕೋವಿಡ್‌ ಲಸಿಕೆಯನ್ನು ಪಡೆದುಕೊಂಡವರು ಮಾತ್ರ ಯಾತ್ರೆಯಲ್ಲಿ ಪಾಲ್ಗೊಳ್ಳಿ. ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ಬಳಕೆ ಮಾಡುವುದನ್ನು ಮಾತ್ರ ಮರೆಯಬೇಡಿ. ದಯವಿಟ್ಟು ಭಾರತ್‌ ಜೋಡೋ ಯಾತ್ರೆಯಲ್ಲಿ ಕೋವಿಡ್‌ ನಿಯಮವನ್ನು ಅನುಸರಿಸಿ ಇಲ್ಲದಿದ್ದರೆ ಯಾತ್ರೆಯನ್ನು ಮುಂದೂಡಿ ಎಂದು ಪತ್ರದಲ್ಲಿ ಕೇಂದ್ರ ಸಚಿವರು ಹೇಳಿದ್ದಾರೆ.


ಚೀನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಕಾಂಗ್ರೆಸ್‌ ನ ಭಾರತ ಜೋಡೋ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗುತ್ತಿದ್ದಾರೆ. ಕೋವಿಡ್‌ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಹಾಗೂ ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ ಮತ್ತು  ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಭಾರತ ಜೋಡೋ ಯಾತ್ರೆಯನ್ನು ಮುಂದೂಡಿ ಎಂದು ಹೇಳಿದ್ದಾರೆ.

ಸೆ.7 ರಿಂದ ಕನ್ಯಾಕುಮಾರಿಯಿಂದ ಆರಂಭವಾದ ಕಾಂಗ್ರೆಸ್‌ ನ ಭಾರತ ಜೋಡೋ ಯಾತ್ರೆ  ಬುಧವಾರ ಹರಿಯಾಣಕ್ಕೆ ಬಂದು ತಲುಪಿದ್ದು ಜಮ್ಮು ಕಾಶ್ಮೀರದಲ್ಲಿ ಭಾರತ್‌ ಜೋಡೋ ಯಾತ್ರೆ ಮುಕ್ತಾಯ ಆಗಲಿದೆ.


WhatsApp

Don't Miss Out! Join Our WhatsApp Group!

Get latest news updates delivered straight to your WhatsApp.