LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್

ಮಾಸ್ಕೋ, 15: ಭಾರತೀಯ ಮೂಲದ ನಾಸಾ ಗಗನಯಾತ್ರಿ ಅನಿಲ ಮೆನನ್ ತಮ್ಮ ಮೊದಲ ಬಾಹ್ಯಾಕಾಶ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ್ದಾರೆ.

ಅನಿಲ್ ಮೆನನ್ ರಷ್ಯಾದ ಸೋಯುಜ್ ಎಂಎಸ್-29 ಬಾಹ್ಯಾಕಾಶ ನೌಕೆಯ ಮೂಲಕ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮನಿಂದ ಉಡಾವಣೆಯಾದರು. ಅವರೊಂದಿಗೆ ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಮತ್ತು ಅನ್ನಾ ಕಿಕಿನಾ ಕೂಡ ಬಾಹ್ಯಾಕಾಶ ಯಾನ ಕೈಗೊಂಡಿದ್ದರು.

ಉಡಾವಣೆಯ ಬಳಿಕ ನಿಗದಿತ ವೇಳಾಪಟ್ಟಿಯಂತೆ ಸೋಯುಜ್ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದೊಂದಿಗೆ ಯಶಸ್ವಿಯಾಗಿ ಜೋಡಣೆಯಾಗಿ, ಮೂವರು ಗಗನಯಾತ್ರಿಗಳು ಸುರಕ್ಷಿತವಾಗಿ ನಿಲ್ದಾಣ ಪ್ರವೇಶಿಸಿದರು.

ಅನಿಲ ಮೆನನ್ ಅವರ ಈ ಮೊದಲ ಬಾಹ್ಯಾಕಾಶ ಯಾನವು ಭಾರತೀಯ ಮೂಲದ ವಿಜ್ಞಾನಿಗಳ ಸಾಧನೆಯ ಮತ್ತೊಂದು ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಅವರು ಮುಂದಿನ ಕೆಲವು ತಿಂಗಳುಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವೈಜ್ಞಾನಿಕ ಪ್ರಯೋಗಗಳು, ವೈದ್ಯಕೀಯ ಸಂಶೋಧನೆ ಹಾಗೂ ವಿವಿಧ ತಾಂತ್ರಿಕ ಅಧ್ಯಯನಗಳಲ್ಲಿ ಭಾಗವಹಿಸಲಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ