LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

743 ಎಕರೆ ಭೂ ಪರಿವರ್ತನೆಯಲ್ಲಿ ಅಕ್ರಮ: ಗಡಾದ ಆರೋಪ

ಬೆಳಗಾವಿ, ನ. 17: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ 28 ಗ್ರಾಮಗಳಲ್ಲಿ 743 ಎಕರೆಗೂ ಅಧಿಕ ಕೃಷಿ ಭೂಮಿಯನ್ನು ನಿಯಮಬಾಹಿರವಾಗಿ ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಡ್ಡಾಯ ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೆ, ಬುಡಾದ ಅಗತ್ಯ ಅನುಮೋದನೆ ಪಡೆಯದೆ ಭೂ ಪರಿವರ್ತನೆ ಆದೇಶ ಹೊರಡಿಸಿದ್ದಾರೆ. ಈ ಕುರಿತು ದಾಖಲೆಗಳೊಂದಿಗೆ ರಾಜ್ಯ ಸರಕಾರಕ್ಕೆ ದೂರು ಸಲ್ಲಿಸಿರುವುದಾಗಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

2026ರ ಫೆಬ್ರವರಿ 18ರ ನಗರಾಭಿವೃದ್ಧಿ ಇಲಾಖೆಯ ಸುತ್ತೋಲೆಯನ್ನು ಉಲ್ಲಂಘಿಸಲಾಗಿದೆ. ಅನುಮೋದನೆ ಇಲ್ಲದೆ ವಸತಿ ಬಡಾವಣೆಗಳನ್ನು ನಿರ್ಮಿಸಿ ನಿವೇಶನಗಳನ್ನು ನೋಂದಣಿ ಮಾಡಲಾಗಿದೆ. ನಾಗರಿಕ ಸೌಲಭ್ಯಗಳಿಗೆ ಮೀಸಲಿಡಬೇಕಾದ ನಿವೇಶನಗಳನ್ನು ಕಾಯ್ದಿರಿಸದೆ, ನಿಗದಿತ ಮಾನದಂಡಗಳಂತೆ ರಸ್ತೆಗಳನ್ನು ನಿರ್ಮಿಸಿಲ್ಲ ಎಂದು ಆರೋಪಿಸಿದರು.

ಈ ಅಕ್ರಮದಲ್ಲಿ ಕಂದಾಯ ಇಲಾಖೆ, ಬುಡಾ, ನಗರ ಯೋಜನಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ಪಾತ್ರವನ್ನೂ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳ ಅಧಿಕಾರಾವಧಿಯಲ್ಲಿ ಹೊರಡಿಸಿರುವ ಎಲ್ಲ ಭೂ ಪರಿವರ್ತನೆ ಆದೇಶಗಳ ತನಿಖೆಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ನಿಯಮ ಉಲ್ಲಂಘನೆ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ನಗರದ ಯೋಜಿತ ಅಭಿವೃದ್ಧಿ ಹಾಗೂ ಸಾರ್ವಜನಿಕ ಹಿತಾಸಕ್ತಿ ರಕ್ಷಣೆಗೆ ಸರಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಗಡಾದ ಒತ್ತಾಯಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST