LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಬೆಳಗಾವಿ, ನ. 12: ಹಾಲು ಮತ್ತು ಹಾಲಿನ ಉತ್ಪನ್ನಗಳು ಹಾಗೂ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ, ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣ ಪರಿಹಾರ ವಿತರಿಸುವಂತೆ ಆಗ್ರಹಿಸಿ ಜಾತ್ಯತೀತ ಜನತಾದಳದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಡಲಗಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕರ್ನಾಟಕ ಹಾಲು ಮಹಾಮಂಡಳವು ಹಾಲು, ಮೊಸರು, ತುಪ್ಪ ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಬೆಲೆಯನ್ನು ₹8ರಿಂದ ₹35ರವರೆಗೆ ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಬಸ್ ಪ್ರಯಾಣ ದರವನ್ನು ಶೇ.23ರಷ್ಟು ಏರಿಕೆ ಮಾಡಿರುವುದು ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರಿದೆ ಎಂದು ಆರೋಪಿಸಿದರು.

ಬರಗಾಲದಿಂದ ಈಗಾಗಲೇ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬೆಲೆ ಏರಿಕೆಗೆ ಕಡಿವಾಣ ಹಾಕುವ ಬದಲು ಜನರ ಮೇಲೆ ಹೆಚ್ಚುವರಿ ಹೊರೆ ಹೇರುತ್ತಿದೆ. ಅಕ್ಕಿ, ಬೇಳೆಕಾಳು, ಸಕ್ಕರೆ, ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾಗಿವೆ. ಹೋಟೆಲ್‌ಗಳಲ್ಲಿಯೂ ಆಹಾರ ಪದಾರ್ಥಗಳ ದರ ಏರಿಕೆಯಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಜೀವನ ನಿರ್ವಹಿಸಲು ಪರದಾಡುವಂತಾಗಿದೆ ಎಂದು ದೂರಿದರು.

ಬರಪೀಡಿತ ರೈತರಿಗೆ ವಿಶೇಷ ಪರಿಹಾರಕ್ಕೆ ಆಗ್ರಹ

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಬರಗಾಲ ಆವರಿಸಿದ್ದು, ಕೃಷಿ ಉತ್ಪಾದನೆ ಕುಸಿದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರಬಿ ಬೆಳೆಗಳು ವ್ಯಾಪಕವಾಗಿ ಹಾನಿಗೊಳಗಾಗಿದ್ದು, ರೈತರಿಗೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಣೆದಾರರಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಿ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು. ಸಾರಿಗೆ ನಿಗಮಗಳು ಹೆಚ್ಚಿಸಿರುವ ಬಸ್ ಪ್ರಯಾಣ ದರವನ್ನು ರದ್ದುಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಂಡು ಬಡವರು, ಕೆಳ ಮಧ್ಯಮ ವರ್ಗ ಹಾಗೂ ಮಧ್ಯಮ ವರ್ಗದ ಜನರ ಹಿತ ರಕ್ಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಹಾಗೂ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮಾಡಲಗಿ ಎಚ್ಚರಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್ಬರ ಪರಿಹಾರ ವಿತರಣೆಯಲ್ಲಿನ ಲೋಪ ಸರಿಪಡಿಸಲು ಸೂಚನೆ