ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನವಾಪಿ ಮಸೀದಿ ಪ್ರಕರಣ : ಹಿಂದೂಗಳ ಅರ್ಜಿಗೆ ಕೋರ್ಟ ಒಪ್ಪಿಗೆ

ವಾರಣಾಸಿ: ವಾರಣಾಸಿಯಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಹಿಂದೂಗಳ ಅರ್ಜಿಯನ್ನು ಜಿಲ್ಲಾ ಕೋರ್ಟ ಪುರಸ್ಕರಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ಐದು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.

ಅರ್ಜಿ ವಿಚಾರಣೆಗೆ ಯೋಗ್ಯವೋ ಅಲ್ಲವೋ ಎಂಬ ಬಗ್ಗೆ ಕೋರ್ಟ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ಹಿಂದೂಗಳ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಮಸೀದಿ ಪರ ವಾದ ಮಂಡಿಸಿದ ವಕೀಲರಿಗೆ ಹಿನ್ನಡೆಯುಂಟಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ ಸೆ.22 ಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ.

ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು.

ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಖನೌದಲ್ಲಿ ವ್ಯಾಪಕ ಬಂದೋಬಸ್ತ ಏರ್ಪಡಿಸಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.