ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹತ್ಯೆಯಾದ ಪ್ರವೀಣ ನೆಟ್ಟಾರು ಪತ್ನಿಗೆ ನೌಕರಿ  

ಬೆಂಗಳೂರು : ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ಶ್ರೀಮತಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಆದೇಶಿಸಿದ್ದಾರೆ.

ಜುಲೈ 26 ರಂದು ದಕ್ಷಿಣ ಕನ್ನಡದ ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಅವರನ್ನು ಹಂತಕರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ವೇಳೆ ಪ್ರವೀಣ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದ ಬೊಮ್ಮಾಯಿ ಕುಟುಂಬಕ್ಕೆ ಸರ್ಕಾರದ ಹುದ್ದೆಯನ್ನು ಕೊಡುವ ಭರವಸೆ ನೀಡಿದ್ದರು.

ಈಗಾಗಲೇ ಪ್ರವೀಣ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.