ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ರಾಜ್ಯಕ್ಕೆ ಸೋನಿಯಾ ಗಾಂಧಿ : ಪುತ್ರನೊಂದಿಗೆ ಪಾದಯಾತ್ರೆಯಲ್ಲಿ ಭಾಗಿ

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಗಮಿಸಲಿದ್ದು, ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ ಟಿಸ್ ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಬರಲಿದ್ದಾರೆ.

ಅಕ್ಟೋಬರ್ 4, 5ರಂದು ಕೊಡಗು ಭಾಗದ ರೆಸಾರ್ಟ​ವೊಂದರಲ್ಲಿ ವಾಸ್ತವ್ಯ ಮಾಡಲಿದ್ದು, ಈ ವೇಳೆಯಲ್ಲಿ ಮುಂಬರುವ ಕರ್ನಾಟಕ ಚುನಾವಣೆ ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಲಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.