LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ: ದೆಹಲಿ ಪೊಲೀಸರಿಗೆ ಎನ್‌ಎಚ್‌ಆರ್‌ಸಿ ನೋಟಿಸ್

ಹೊಸದಿಲ್ಲಿ, ಅ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಮೂವರು ಮಹಿಳಾ ಪತ್ರಕರ್ತೆಯರಿಗೆ ಪೊಲೀಸರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ), ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 3 ಮತ್ತು 4ರಂದು ಸಂಸತ್ ಭವನ ಪೊಲೀಸ್ ಠಾಣೆ ಸಮೀಪ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪತ್ರಕರ್ತೆಯರ ಮೇಲೆ ಹಲ್ಲೆ ಮತ್ತು ಲೈಂಗಿಕ ಕಿರುಕುಳ ನಡೆದಿರುವ ಕುರಿತು ಮಾಧ್ಯಮ ವರದಿಗಳು ಪ್ರಕಟವಾಗಿದ್ದವು.

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿರುವ ದೃಶ್ಯ ಚಿತ್ರೀಕರಿಸುತ್ತಿದ್ದಾಗ ಎಸಿಪಿ ವಿವೇಕ್ ಭಗತ್ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ತಳ್ಳಾಟ ನಡೆಸಿದ್ದಾರೆ ಎಂದು ಪತ್ರಕರ್ತೆಯೊಬ್ಬರು ಆರೋಪಿಸಿದ್ದಾರೆ.

ಎಸಿಪಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ 17 ವಿದ್ಯಾರ್ಥಿಗಳು ಹಾಗೂ ಸ್ವತಂತ್ರ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದರು.

ಅಕ್ಟೋಬರ್ 5ರಂದು ಬಂಧಿತ ಎಲ್ಲ 17 ಮಂದಿಗೆ ಪಟಿಯಾಳಾ ಹೌಸ್ ಕೋರ್ಟ ಜಾಮೀನು ಮಂಜೂರು ಮಾಡಿದೆ. ಕಸ್ಟಡಿಯಲ್ಲಿ ಹಲ್ಲೆ ನಡೆದಿರುವ ಆರೋಪದ ಕುರಿತು ವರದಿ ಸಲ್ಲಿಸುವಂತೆ ಹಾಗೂ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸುವಂತೆ ಪೊಲೀಸ್ ಉಪ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಮಹಿಳಾ ಪತ್ರಕರ್ತೆಯರ ದೂರುಗಳನ್ನು ಹೆಚ್ಚಿನ ತನಿಖೆಗಾಗಿ ದೆಹಲಿ ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ಕ್ರಮವನ್ನು ಖಂಡಿಸಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೂಡ ಪತ್ರಕರ್ತೆಯರಿಗೆ ಬೆಂಬಲ ವ್ಯಕ್ತಪಡಿಸಿದೆ.

ಇದೇ ವೇಳೆ, ಎಸಿಪಿ ವಿವೇಕ್ ಭಗತ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿರುವಂತೆ ಬಿಂಬಿಸುವ ಕೃತಕ ಬುದ್ಧಿಮತ್ತೆ (ಎಐ) ಸೃಷ್ಟಿತ ನಕಲಿ ವಿಡಿಯೋ ಹಂಚಿಕೊಂಡ ಆರೋಪದಲ್ಲಿ ಪತ್ರಕರ್ತ ನದೀಮ್ ಅಹ್ಮದ್ ಅಮೀನ್ ಅವರನ್ನು ಅಕ್ಟೋಬರ್ 6ರಂದು ಪೊಲೀಸರು ಬಂಧಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪ್ರತಿಭಟನೆಗೆ ತೆರಳದಂತೆ ಮಹಾರಾಷ್ಟ್ರ ಪೊಲೀಸರ ನೋಟಿಸ್ಸ್ಟಿಂಗ್‌ ಕುತಂತ್ರ: ಮುಂದಿನ ವಾರ ದಾಖಲೆ ಬಿಡುಗಡೆಸಂಕೇಶ್ವರ ಬಳಿ ಅಪಘಾತ: ಟಿಪ್ಪರ್‌ಗೆ ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯಅಂಗನವಾಡಿ ನೇಮಕಾತಿಯಲ್ಲಿ ಹಣ ವಸೂಲಿ ಆರೋಪ: ಹುಕ್ಕೇರಿ ಸಿಡಿಪಿಒಗೆ ನೋಟಿಸ್ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಸಾಧ್ಯತೆನವಲಗುಂದ ಬಳಿ ಭೀಕರ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿಗೆ ನಾಲ್ವರ ಬಲಿಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಎಲ್ಲೆಡೆ ನಿರ್ಬಂಧಪ್ರತಿಭಟನೆಗೆ ಪರ್ಯಾಯ ಸ್ಥಳ ಗುರುತಿಸಿ: ಸುಪ್ರೀಂ ಕೋರ್ಟಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ: ದೆಹಲಿ ಪೊಲೀಸರಿಗೆ ಎನ್‌ಎಚ್‌ಆರ್‌ಸಿ ನೋಟಿಸ್‘ಸಂವಿಧಾನ ಉಳಿಸಲು ಬೀದಿಗಿಳಿಯಿರಿ’: ದೇಶದ ಜನತೆಗೆ ತುಷಾರ್ ಗಾಂಧಿ ಕರೆ