ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜತ್ತ ತಾಲೂಕಿಗೆ ಕರ್ನಾಟಕ ಮುಖ್ಯಮಂತ್ರಿ ಭೇಟಿ ನೀಡಲಿ : ಕನ್ನಡಿಗರ ಆಗ್ರಹ

ಬೆಳಗಾವಿ : ಗಡಿ ವಿವಾದದ ಕಳೆದ ಎರಡು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತ ಮಹಾರಾಷ್ಟ್ರದ ಜತ್ತ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಕನ್ನಡ ಧ್ವಜ ಹಾಗೂ ಕರುನಾಡಿಗೆ ಜೈ ಎಂದು ನಾಮಫಲಕ ಹಾಕಿ, ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಧ್ವಜಗಳನ್ನು ಹಿಡಿದು ಕರುನಾಡಿಗೆ ಜೈಕಾರ ಹಾಕಿದ ಕನ್ನಡಿಗರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ 75 ವರ್ಷಗಳಿಂದ ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ನೀರಾವರಿ ಯೋಜನೆಯನ್ನು ರೂಪಿಸಿಲ್ಲ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಜತ್ತ ತಾಲೂಕಿನ 42 ಹಳ್ಳಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದು, ನಮಗೆ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸಭೆ ಮೇಲೆ ಸಭೆ ನಡೆಸಿ ಜತ್ತ ಕಡೆ ತಿರುಗಿ ನೋಡುವಂತಾಗಿದೆ. ಇದಕ್ಕೆ ಕಾರಣವಾದ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಕನ್ನಡಿಗರು ಹೇಳಿದ್ದಾರೆ.

ಇಲ್ಲಿ ಕಳೆದ 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಗೂ ಮೂಲ ಸೌಕರ್ಯ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಕರ್ನಾಟಕಕ್ಕೆ ಸೇರಲು ನಾವು ತುದಿಗಾಲ ಮೇಲೆ ನಿಂತಿದ್ದೇವೆ. ಜತ್ತ ತಾಲೂಕಿನ 42 ಗ್ರಾಮಗಳ ಗ್ರಾಮಸ್ಥರ ಸಭೆ ಮಾಡಲು ನಾವು ತಯಾರಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗನೆ ತಾಲೂಕಿಗೆ ಭೇಟಿ ನೀಡುವಂತೆ ಮಹಾ ಕನ್ನಡಿಗಳು ಆಹ್ವಾನ ನೀಡಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.