LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಕರ್ನಾಟಕ ರಾಜ್ಯವು ಆರ್ಎಸ್ಎಸ್ ಪ್ರಯೋಗ ಶಾಲೆಯಾಗಿದೆ -ಕೇರಳ ಮುಖ್ಯಮಂತ್ರಿ

ಬಾಗೇಪಲ್ಲಿ: ಕರ್ನಾಟಕವು ಆರ್‌ಎಸ್‌ಎಸ್‌ ಪ್ರಯೋಗಶಾಲೆ ಆಗಿದ್ದು ರಾಜ್ಯದಲ್ಲಿ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸವನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಮಾಡುತ್ತಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.



ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದ ಸಿಪಿಎಂ ರಾಜಕೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕಾರಣಕ್ಕಾಗಿ ಸಂಘ ಸಿದ್ಧಾಂತವನ್ನು ಉತ್ತೇಜಿಸುವ ಶಾಲಾ ಪಠ್ಯಪುಸ್ತಕಗಳನ್ನು ರಾಜ್ಯದಲ್ಲಿ ಮುದ್ರಿಸಲಾಗಿದೆ ಎಂದರು.



ಇವಿ ರಾಮಸಾಮಿ ಪೆರಿಯಾರ್ ಅವರನ್ನು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಹೊರಗಿಟ್ಟಿರುವ ಕುರಿತು ದೊಡ್ಡ ವಿವಾದವೇ ಭುಗಿಲೆದ್ದಿದ್ದು ಆರ್‌ಎಸ್‌ಎಸ್ ಸ್ಥಾಪಕ ಬಲಿರಾಮ ಹೆಡಗೇವಾರ ಭಾಷಣವನ್ನು ಕರ್ನಾಟಕದಲ್ಲಿ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದೆ. ನಾರಾಯಣಗುರು, ಪೆರಿಯಾರ್ ರಾಮಸ್ವಾಮಿ ಅವರ ವಿಚಾರಗಳನ್ನು ಅಪ್ರಸ್ತುತಗೊಳಿಸಲಾಗಿದೆ. ಪ್ರಗತಿಪರ ವಿಚಾರಗಳನ್ನು ಪಠ್ಯ ಪುಸ್ತಕಗಳಿಂದ ಹೊರಗಿಟ್ಟು ಕೇಸರೀಕರಣಗೊಳಿಸಲಾಗಿದೆ ಎಂದು ಹೇಳಿದರು.



2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ. ಮುಸ್ಲಿಮರ ವಿರುದ್ಧ ಅನಗತ್ಯವಾದ ಪದೇ ಪದೇ ವಿವಾದಗಳನ್ನು ಸೃಷ್ಟಿಸಲಾಗುತ್ತಿದೆ. ಲವ್ ಜಿಹಾದ್ ಸೇರಿದಂತೆ ಹಲವು ಸುಳ್ಳುಗಳು ಆರ್‌ಎಸ್‌ಎಸ್ ಕಾರ್ಖಾನೆಯಿಂದ ಉತ್ಪಾದನೆ ಆಗುತ್ತಲೇ ಇವೆ ಎಂದು ಕೇರಳ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.



ಭಾರತೀಯ ಕಮ್ಯುನಿಸ್ಟ ಪಕ್ಷ(ಎಂ) ಮಾತ್ರ ರಾಷ್ಟ್ರವನ್ನು ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಬಲ್ಲದು ಮತ್ತು ನಮ್ಮ ಪಕ್ಷ ಮಾತ್ರ ಬಿಜೆಪಿ ಮತ್ತು ಸಂಘ ಪರಿವಾರವನ್ನು ಬದಿಗೊತ್ತಬಹುದು ಎಂದರು.



ಕೇರಳದಲ್ಲಿ ಸಿಪಿಐ(ಎಂ) ಧರ್ಮ ರಾಜಕಾರಣವನ್ನು ಕೊನೆಗೊಳಿಸಿದರೆ ಕರ್ನಾಟಕದಲ್ಲಿ ಅದಕ್ಕೆ ವಿರುದ್ಧವಾಗಿ ಧರ್ಮ ರಾಜಕಾರಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿಜಯನ್ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ