LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಶ್ವಾಸಮತ ಗೆದ್ದ ಆಪ್; ಆಪರೇಷನ್ ಕಮಲ ವಿಫಲ ಎಂದ ಕೇಜ್ರಿವಾಲ್

ಹೊಸದಿಲ್ಲಿ : ದೆಹಲಿ ಮುಖ್ಯಮಂತ್ರಿ ಅರವಿಂದ‌ ಕೇಜ್ರಿವಾಲ್‌ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಸದನದಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು.



ವಿಶ್ವಾಸ ನಿರ್ಣಯ ಗೆದ್ದ ಬಳಿಕ ಮಾತನಾಡಿದ ಕೇಜ್ರಿವಾಲ್, ನಮ್ಮ ಪಕ್ಷ ಹಾರ್ಡ್ ಕೋರ್ ಪ್ರಾಮಾಣಿಕ ಪಕ್ಷವಾಗಿದ್ದು, ಯಾವುದೇ ಶಾಸಕರನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಹೇಳಿದರು.



ದೆಹಲಿ ಸರ್ಕಾರವನ್ನು ಉರುಳಿಸಲು ಕೇಂದ್ರ ಸರ್ಕಾರ 40 ಎಎಪಿ ಶಾಸಕರನ್ನು ಖರೀದಿಸಲು ಪ್ರಯತ್ನಿಸಿತ್ತು ಎಂದು ಕೇಜ್ರಿವಾಲ್ ಆರೋಪಿಸಿದರು.



ಪ್ರಸ್ತುತ ಕೆನಡಾದಲ್ಲಿರುವ ದೆಹಲಿ ವಿಧಾನಸಭಾ ಸಭಾಪತಿ ರಾಮ ನಿವಾಸ ಗೋಯೆಲ್, ಜೈಲಿನಲ್ಲಿರುವ ಸತ್ಯೇಂದರ ಜೈನ ಮತ್ತು ಆಸ್ಟ್ರೇಲಿಯಾದಲ್ಲಿರುವ ನರೇಶ ಬಲ್ಯಾನ್ ಅವರನ್ನು ಹೊರತುಪಡಿಸಿ ಇತರ ಎಲ್ಲಾ 59 ಶಾಸಕರು ಇಂದು ಸದನದಲ್ಲಿ ಹಾಜರಿದ್ದು, ವಿಶ್ವಾಸ ನಿರ್ಣಯದ ಪರವಾಗಿ ಮತ ಚಲಾಯಿಸಿದರು.



ಇದರೊಂದಿಗೆ ದೆಹಲಿಯಲ್ಲಿ ಬಿಜೆಪಿಯ ಆಪರೇಷನ್ ಕಮಲ ವಿಫಲವಾಯಿತು ಎಂದು ಕೇಜ್ರಿವಾಲ್ ಹೇಳಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 62 ಶಾಸಕರನ್ನು ಹೊಂದಿದ್ದರೆ ಬಿಜೆಪಿ 8 ಶಾಸಕರನ್ನು ಹೊಂದಿದೆ.



ಬಿಜೆಪಿ ತನ್ನ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದ ನಂತರ ಕೇಜ್ರಿವಾಲ್ ಅವರು ಸದನದಲ್ಲಿ ವಿಶ್ವಾಸ ನಿರ್ಣಯ ಮಂಡಿಸಿದ್ದರು.

ಅಬಕಾರಿ ನೀತಿಯ ಕುರಿತು ನಡೆಯುತ್ತಿರುವ ಸಿಬಿಐ ತನಿಖೆ ಮತ್ತು ಬಿಜೆಪಿ ಆಪರೇಷನ್ ಕಮಲದಡಿಯಲ್ಲಿ ಶಾಸಕರ ಖರೀದಿ ಯತ್ನ ವಿಚಾರಗಳ ಕುರಿತು ಚರ್ಚಿಸಲು ವಿಧಾನಸಭೆಯ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು.



ಸದನದಲ್ಲಿ ಹಾಜರಿದ್ದ ಎಲ್ಲಾ 59 ಶಾಸಕರು ವಿಶ್ವಾಸ ನಿರ್ಣಯವನ್ನು ಬೆಂಬಲಿಸಿದ್ದಾರೆ. ಯಾರೂ ವಿರೋಧ ವ್ಯಕ್ತಪಡಿಸಿದ ಕಾರಣ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಉಪ ಸ್ಪೀಕರ್ ರಾಖಿ ಬಿರ್ಲಾ ಘೋಷಿಸಿ, ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ