LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಜಿಲ್ಲಾಸ್ಪತ್ರೆಯ ಮಕ್ಕಳತಜ್ಞ ವೈದ್ಯರ ಅಪಹರಣ : ₹ 3 ಕೋಟಿ ಬೇಡಿಕೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.



ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು, ವೈದ್ಯರ ಬಾಯಿಮುಚ್ಚಿ ಕಾರಿನಲ್ಲಿ ಕೂಡ್ರಿಸಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರ ಸಹೋದರ ಹಾಗೂ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿರುವ ವೇಣು ಅವರಿಗೆ ಅಪಹರಣಕಾರರು ಕರೆ ಮಾಡಿದ್ದು, ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.



ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದು, ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ. ಅಪಹರಣಕ್ಕೊಳಗಾದ ಡಾ.ಸುನೀಲ ಅವರ ಮೊಬೈಲನಿಂದಲೇ ಕರೆ ಮಾಡುತ್ತಿರುವ ಅಪಹರಣಕಾರರು ಮೂರು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.



ಬಳ್ಳಾರಿ ಜಿಲ್ಲಾ ಪೊಲೀಸ ವರಿಷ್ಠರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಶೋಧ ಕಾರ್ಯ ನಡೆದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ