ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಾಲುಗೆ ಕಿಡ್ನಿ ದಾನ ಮಾಡಲಿರುವ ಮಗಳು 

ಹೊಸದಿಲ್ಲಿ: ಅನಾರೋಗ್ಯಕ್ಕೆ ಒಳಗಾಗಿರುವ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ ಯಾದವ ಅವರಿಗೆ ಸಿಂಗಪುರದಲ್ಲಿರುವ ಮಗಳು ರೋಶಿನಿ ಯಾದವ ಅವರು ಕಿಡ್ನಿ ದಾನ ಮಾಡಲಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದಾರೆ.

ಸಿಂಗಪುರದಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ 74 ವರ್ಷದ ಲಾಲು, ಕಳೆದ ತಿಂಗಳು ಸ್ವದೇಶಕ್ಕೆ ವಾಪಸ್ ಆಗಿದ್ದರು. ಆರ್ ಜೆ ಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಂಗಪುರದಲ್ಲಿರುವ ಅವರ ಮಗಳು ರೋಶಿನಿ ಯಾದವ ಅವರು ತಮ್ಮ ತಂದೆಗಾಗಿ ಮೂತ್ರಪಿಂಡ ನೀಡಲು ಮುಂದೆ ಬಂದಿದ್ದಾರೆ ಎಂದು ಕುಟುಂಬ ಸದಸ್ಯರೊಬ್ಬರು ತಿಳಿಸಿದ್ದಾರೆ. ಸದ್ಯ, ದೆಹಲಿಯಲ್ಲಿರುವ ಅವರು, ದೆಹಲಿ ಮತ್ತು ರಾಂಚಿ ಆಸ್ಪತ್ರೆಗಳಲ್ಲಿ ಈ ಹಿಂದೆ ಮೂತ್ರಪಿಂಡ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಲಾಲು ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಎಲ್ಲಿ ಮತ್ತು ಯಾವಾಗ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.