LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನ

ಬೆಂಗಳೂರು, ಆಗಸ್ಟ್ 3: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ಶಾಸಕರ ಹೆಸರನ್ನು ಅಂತಿಮಗೊಳಿಸಿದ್ದರೂ, ಕೊನೆಯ ಕ್ಷಣದ ರಾಜಕೀಯ ಬೆಳವಣಿಗೆಗಳ ಪರಿಣಾಮ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಲೋಕಭವನದಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರಚಂದ ಗೆಹ್ಲೋಟ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯ ಸಿಂಗ್ ಮೊದಲಿಗೆ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಎಚ್‌.ಸಿ.ಬಾಲಕೃಷ್ಣ, ಕೆ.ಎಸ್.ಬಸವಂತಪ್ಪ, ಬಸವರಾಜ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಲಕ್ಷ್ಮಣ ಸವದಿ, ಮಧು ಬಂಗಾರಪ್ಪ, ಎಸ್‌.ಎಸ್.ಮಲ್ಲಿಕಾರ್ಜುನ, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ ಲಾಡ್, ಶಿವಲಿಂಗೇಗೌಡ, ಶಿವರಾಜ ತಂಗಡಗಿ, ವಿಜಯಾನಂದ ಕಾಶಪ್ಪನವರ್ ಹಾಗೂ ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು ಗಮನಸೆಳೆಯಿತು.

ಇದಕ್ಕೂ ಮುನ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಕಳುಹಿಸಿದ್ದ ಪತ್ರದಲ್ಲಿ 20 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರಿಸಲು ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿರುವುದಾಗಿ ತಿಳಿಸಲಾಗಿತ್ತು. ಆದರೆ ಅಂತಿಮ ಪಟ್ಟಿಯಲ್ಲಿದ್ದ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆಯ ಕ್ಷಣದಲ್ಲಿ ಅವಕಾಶ ದೊರೆಯಲಿಲ್ಲ.

ಗಾಯತ್ರಿ ಶಾಂತೇಗೌಡ ಅವರನ್ನು ಕೈಬಿಟ್ಟ ಪರಿಣಾಮ ಹೊಸ ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವೇ ಇಲ್ಲದಂತಾಗಿದೆ. ಕೊನೆಯ ಕ್ಷಣದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ಹಾಗೂ ಮಹಿಳಾ ಸಚಿವ ಸ್ಥಾನಕ್ಕಾಗಿ ಪಕ್ಷದೊಳಗಿನ ತೀವ್ರ ಪೈಪೋಟಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಆರಂಭದಲ್ಲಿ ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದ್ದರೂ, ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಕರೆ ಬಂದಿರಲಿಲ್ಲ. ವಿಧಾನ ಪರಿಷತ್ ಸದಸ್ಯೆಯಾಗಿ ಅವರು ಇತ್ತೀಚೆಗಷ್ಟೇ ಪ್ರಮಾಣವಚನ ಸ್ವೀಕರಿಸಿರುವುದನ್ನು ಒಳಗೊಂಡಂತೆ ಪಕ್ಷದೊಳಗಿನ ಅಸಮಾಧಾನ ಮತ್ತು ರಾಜಕೀಯ ಸಮೀಕರಣಗಳ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಮಹಿಳಾ ಸಚಿವ ಸ್ಥಾನಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ಉಮಾಶ್ರೀ ಅವರ ಹೆಸರುಗಳೂ ಚರ್ಚೆಗೆ ಬಂದಿದ್ದವು. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ ನಡುವೆ ಮಹತ್ವದ ಮಾತುಕತೆ ನಡೆದಿದ್ದು, ರಾಜ್ಯ ನಾಯಕರ ಒತ್ತಡದ ಹಿನ್ನೆಲೆಯಲ್ಲಿ ವರಿಷ್ಠರು ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ