LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ, ಅಶ್ರುವಾಯು: ತುರ್ತು ವಿಚಾರಣೆಗೆ ಹೈಕೋರ್ಟ ನಿರಾಕರಣೆ

ಹೊಸದಿಲ್ಲಿ, ಜುಲೈ 21: ‘ಸಂಸತ್‌ ಚಲೊ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಶೆಲ್‌ಗಳನ್ನು ಸಿಡಿಸಿರುವುದಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಇಂತಹ ವಿಷಯಗಳಲ್ಲಿ ನ್ಯಾಯಾಲಯವನ್ನು ಅನಗತ್ಯವಾಗಿ ಎಳೆಯಬೇಡಿ ಎಂದು ಅರ್ಜಿದಾರರಿಗೆ ಸೂಚಿಸಿತು.

ಅರ್ಜಿಯ ನಿಯಮಿತ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಪೀಠ ತಿಳಿಸಿತು.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನೇತೃತ್ವದಲ್ಲಿ ಸೋಮವಾರ ಸಾವಿರಾರು ವಿದ್ಯಾರ್ಥಿಗಳು ‘ಸಂಸತ್‌ ಚಲೊ’ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಬಲಪ್ರಯೋಗ ನಡೆಸಿದ್ದಾರೆ. ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ಬಳಕೆಯಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟಗಾರ ಸೊನಮ್ ವಾಂಗ್ಚುಕ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೊ ಅವರನ್ನೂ ಪೊಲೀಸರು ತಳ್ಳಿದ್ದಾರೆ ಎಂದು ಸಿಜೆಪಿ ಆರೋಪಿಸಿದೆ.

ಆದರೆ, ಗೀತಾಂಜಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಹಾಗೂ ಜನರನ್ನು ದಾರಿ ತಪ್ಪಿಸುವಂತಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ