LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಆನಲೈನ್ ವಂಚನೆ; ಬಾವಿಗೆ ಹಾರಿ ಉಪನ್ಯಾಸಕಿಯ ಆತ್ಮಹತ್ಯೆ

ಬೀದರ: ಆನ್ಲೈನ್ ನಲ್ಲಿ ಹೂಡಿಕೆಯ ವಂಚನೆಗೊಳಗಾದ ಬೀದರ ಜಿಲ್ಲೆ ಬಸವಕಲ್ಯಾಣದ ಉಪನ್ಯಾಸಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರತಿ ಕನಾಟೆ(28) ಆತ್ಮಹತ್ಯೆ ಮಾಡಿಕೊಂಡವರು. 2.5 ಲಕ್ಷ ರೂಪಾಯಿ ಕಳೆದುಕೊಂಡ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಪತ್ರದಲ್ಲಿ ಈ ವಿಚಾರ ಬರೆದಿಟ್ಟಿದ್ದಾರೆ.



ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಆರತಿ ಕನಾಟೆ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪಾರ್ಟ ಟೈಮ್ ಉದ್ಯೋಗದ ಹೆಸರಿನಲ್ಲಿ ಸಂದೇಶ ಬಂದಿದೆ. ಆನ್ಲೈನ್ ಮೂಲಕ ಪರಿಚಿತನಾದ ವ್ಯಕ್ತಿ ನೋಂದಣಿ ಇತರೆ ಪ್ರಕ್ರಿಯೆಗಳಿಗೆ ಹೂಡಿಕೆಯ ಮೊದಲ ಕಂತಾಗಿ ಒಂದು ಸಾವಿರ ರೂಪಾಯಿ ಪಡೆದುಕೊಂಡಿದ್ದಾನೆ. ನಂತರ ಹಂತ ಹಂತವಾಗಿ ಎರಡು ಲಕ್ಷ ರೂ.ಗೂ ಅಧಿಕ ಹಣ ಪಡೆದುಕೊಂಡಿದ್ದು, ಮತ್ತೆ 80,000 ಹೂಡಿಕೆ ಮಾಡಿದರೆ ಎಲ್ಲಾ ಹಣ ವಾಪಸ್ ಬರುತ್ತದೆ ಎಂದು ತಿಳಿಸಿದ್ದಾನೆ.



ಈಗಾಗಲೇ 2.5 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ ಆರತಿ ಅವರಿಗೆ ವಂಚನೆಗೊಳಗಾಗಿರುವುದು ಗೊತ್ತಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ತಂದೆ ಶಿವರಾಜ ಕನಾಟೆ ದೂರು ನೀಡಿದ್ದು, ಬಸವಕಲ್ಯಾಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ