LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ವಿದ್ಯಾರ್ಥಿನಿಯ ಅಪಹರಿಸಿ ಪರಾರಿಯಾದ ಉಪನ್ಯಾಸಕ

ಅಥಣಿ: ಪಟ್ಟಣದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರೀತಿ, ಪ್ರೇಮದ ಹುಚ್ಚು ಹಿಡಿಸಿದ ಅದೇ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಯುವತಿಯ ತಂದೆ ಅಥಣಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಕಾಗವಾಡ ತಾಲೂಕಿನ ಉಗಾರ ಗ್ರಾಮದ ಪವನಕುಮಾರ ಶೀಲಗಾರ(28) ಎಂಬ ಅವಿವಾಹಿತ ಉಪನ್ಯಾಸಕ ಅದೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಕಳೆದ ಜ. 8 ರಂದು ಅಪಹರಿಸಿಕೊಂಡು ಎಸ್ಕೇಪ್ ಆಗಿದ್ದ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಪೊಷಕರು ದೂರು ದಾಖಲು ಮಾಡಿದ್ದಾರೆ, 10 ದಿನಗಳು ಕಳೆದರೂ ಇನ್ನೂ ಇವರು ಮರಳಿ ಊರಿಗೆ ಬಂದಿಲ್ಲ, ಪೊಲೀಸರು ಶೋಧನಾ ಕಾರ್ಯದಲ್ಲಿ ತೊಡಗಿದ್ದು, ಇಬ್ಬರ ಮೊಬೈಲ್‌ಗಳು ಸ್ವಿಚ್ ಆಫ್ ಆಗಿವೆ,ವಿದ್ಯಾರ್ಥಿನಿಯರ ಪಾಲಕರು ದಿನನಿತ್ಯ ಮಗಳ ಬರುವಿಕೆಗಾಗಿ ಕಣ್ಣೀರು ಹಾಕುತ್ತಿದ್ದಾರೆ.



ಅಥಣಿ ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು ಉಪನ್ಯಾಸಕ ಹಾಗೂ ವಿದ್ಯಾರ್ಥಿನಿಯ ಪತ್ತೆಗೆ ಮುಂದಾಗಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ