LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ

ಹೊಸದಿಲ್ಲಿ, ನ. 12: ದೇಶದ ವಿವಿಧ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಯಶೋಗಾಥೆಗಳನ್ನು ಜನರ ಮುಂದಿಡಲು ಮಾಧ್ಯಮಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ‘ದೀಪಾವಳಿ ಮಿಲನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ದಿಕ್ಕಿನಲ್ಲಿ ವೇಗವಾಗಿ ಸಾಗುತ್ತಿದೆ. ದೇಶದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ದೇಶವು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಬಡತನ ನಿರ್ಮೂಲನೆಯಲ್ಲಿಯೂ ಎನ್‌ಡಿಎ ಸರ್ಕಾರ ಯಶಸ್ಸು ಕಂಡಿದೆ. ಹಿಂದೆ ‘ಗರೀಬಿ ಹಠಾವೊ’ ಎಂಬುದು ಕೇವಲ ಘೋಷಣೆಯಾಗಿತ್ತು. ಆದರೆ, ನಮ್ಮ ಸರ್ಕಾರ ಬಡತನ ನಿರ್ಮೂಲನೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರತಿಪಾದಿಸಿದರು.

ವಿಶ್ವ ಬ್ಯಾಂಕ್ ವರದಿಯನ್ನು ಉಲ್ಲೇಖಿಸಿದ ಮೋದಿ, ಕಳೆದ 12 ವರ್ಷಗಳಲ್ಲಿ ದೇಶದ ಸುಮಾರು 50 ಕೋಟಿ ಜನರು ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ ಎಂದು ಹೇಳಿದರು.

ಮಾಧ್ಯಮ ಕ್ಷೇತ್ರದಲ್ಲಿನ ಬದಲಾವಣೆಗಳ ಕುರಿತು ಮಾತನಾಡಿದ ಅವರು, ತಾವು ದೀರ್ಘಕಾಲದಿಂದ ಮಾಧ್ಯಮಗಳೊಂದಿಗೆ ಸಂಪರ್ಕ ಹೊಂದಿದ್ದು, ಪತ್ರಿಕಾ ಪ್ರಕಟಣೆಗಳ ಕಾಲದಿಂದ ಇನ್‌ಸ್ಟಾಗ್ರಾಮ್ ರೀಲ್‌ಗಳ ಯುಗದವರೆಗೆ ಮಾಧ್ಯಮಗಳು ವಿಕಸನಗೊಂಡಿರುವುದನ್ನು ಗಮನಿಸಿದ್ದಾಗಿ ತಿಳಿಸಿದರು.

ಬಿಕ್ಕಟ್ಟು, ವಿಪತ್ತು ಹಾಗೂ ಸಂಕಷ್ಟದ ಸಂದರ್ಭಗಳಲ್ಲಿಯೂ ವರದಿಗಾರರು ಅಪಾಯಗಳನ್ನು ಲೆಕ್ಕಿಸದೆ ಘಟನಾ ಸ್ಥಳಗಳಿಗೆ ತೆರಳಿ ಸುದ್ದಿ ಸಂಗ್ರಹಿಸುತ್ತಾರೆ. ಸಮಾಜಕ್ಕೆ ಮಾಹಿತಿ ತಲುಪಿಸುವ ಅವರ ಬದ್ಧತೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರ್ಬಳಕೆ ಕುರಿತು ಕಳವಳ ವ್ಯಕ್ತಪಡಿಸಿದ ಪ್ರಧಾನಿ, ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಮಾಧ್ಯಮಗಳು ಸಕ್ರಿಯ ಪಾತ್ರ ವಹಿಸಬೇಕು. ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್ಬರ ಪರಿಹಾರ ವಿತರಣೆಯಲ್ಲಿನ ಲೋಪ ಸರಿಪಡಿಸಲು ಸೂಚನೆ