ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾತುಕತೆ ಮೂಲಕ ಗಡಿ ವಿವಾದ ಬಗೆಹರಿಸೋಣ : ಮಹಾರಾಷ್ಟ್ರ ಮುಖ್ಯಮಂತ್ರಿ

ಬೆಳಗಾವಿ: ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ.

ಈ ಕುರಿತು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ  ಮುಖ್ಯಮಂತ್ರಿ ಏಕನಾಥ ಶಿಂಧೆ, ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಮ ಕೋರ್ಟನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ವಿವಾದ ಸರ್ವ ಸಮ್ಮತಿಯ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ನಾವು ಸಭೆಯನ್ನು ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಗಡಿಭಾಗದ ಮರಾಠಿಗರಿಗೆ ಸಿಗುತ್ತಿದ್ದ ಮಹಾರಾಷ್ಟ್ರ ಸರ್ಕಾರದ ಯೋಜನೆಗಳ ಲಾಭವನ್ನು ಹೆಚ್ಚಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಹತ್ತು ಸಾವಿರ ರೂಪಾಯಿಯಿಂದ 20 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನೂ ಮತ್ತೆ ಶುರು ಮಾಡಿದ್ದೇವೆ ಎಂದರು.

ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಫುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದು ಅವರು ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.