LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸಕ್ಕರೆ ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಗೋದಾಮುಗಳಿಗೆ ಬೀಗ

ಮೂಡಲಗಿ, ಅ.28: ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಿಸುವವರೆಗೆ ಕಾರ್ಖಾನೆಗಳಿಂದ ಸಕ್ಕರೆ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿರುವ ರಾಜ್ಯ ರೈತ ಸಂಘದ ಮುಖಂಡರು, ಬುಧವಾರ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ತೆರಳಿ ಗೋದಾಮುಗಳಿಗೆ ಬೀಗ ಹಾಕಿಸಿದರು.

ಸಚಿವ ಸತೀಶ ಜಾರಕಿಹೊಳಿ ಒಡೆತನದ ಮೂಡಲಗಿ ತಾಲ್ಲೂಕಿನ ಸತೀಶ ಶುಗರ್ಸ್, ಅಳಗವಾಡಿಯ ಬೀರೇಶ್ವರ ಸಕ್ಕರೆ ಕಾರ್ಖಾನೆ, ಬೆಲ್ಲದ ಬಾಗೇವಾಡಿಯ ವಿಶ್ವನಾಥ ಸಕ್ಕರೆ ಕಾರ್ಖಾನೆ ಹಾಗೂ ಸಮೀರವಾಡಿಯ ಸೋಮಯ್ಯ ಸಕ್ಕರೆ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳಿಗೆ ಭೇಟಿ ನೀಡಿದ ರೈತ ಮುಖಂಡರು, ಆಡಳಿತ ಮಂಡಳಿಯವರಿಂದಲೇ ಸಕ್ಕರೆ ಗೋದಾಮುಗಳಿಗೆ ಬೀಗ ಹಾಕಿಸಿದರು.

‘ಕಬ್ಬಿಗೆ ಟನ್‌ಗೆ ₹5,500 ದರ ಪಡೆಯುವುದು ನಮ್ಮ ಹಕ್ಕು. ಈ ಬೇಡಿಕೆ ಈಡೇರಬೇಕಾದರೆ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಕೆ.ಜಿ.ಗೆ ₹31ರಿಂದ ₹60ಕ್ಕೆ ಹೆಚ್ಚಿಸಬೇಕು. ಕಳೆದ 10 ವರ್ಷಗಳಿಂದ ಸಕ್ಕರೆ ಮಾರಾಟ ಬೆಲೆ ಹೆಚ್ಚಿಸಿಲ್ಲ. ಸಕ್ಕರೆಗೆ ಸೂಕ್ತ ಬೆಲೆ ದೊರೆತರೆ ಕಬ್ಬು ಬೆಳೆಗಾರರಿಗೂ ಹೆಚ್ಚಿನ ದರ ನೀಡಲು ಸಾಧ್ಯವಾಗುತ್ತದೆ’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ಹೇಳಿದರು.

ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ಕಳೆದ ಒಂದು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಬೇಡಿಕೆ ಈಡೇರುವವರೆಗೆ ಯಾವುದೇ ಕಾರಣಕ್ಕೂ ಗೋದಾಮುಗಳಿಂದ ಸಕ್ಕರೆ ಹೊರತೆಗೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಕೆ.ಜಿ.ಗೆ ಕನಿಷ್ಠ ₹50ಕ್ಕೆ ಹೆಚ್ಚಿಸಬೇಕಾಗಿದೆ. ಈ ಕುರಿತು ಪ್ರಯತ್ನಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭರವಸೆ ನೀಡಿದ್ದಾರೆ. ಅವರು ನೀಡಿದ ಮಾತನ್ನು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಪರಿಶೀಲಿಸಲು ಕೇಂದ್ರದ ಜಂಟಿ ಸಮಿತಿ ಗುರುವಾರ (ಅ.29) ಬೆಂಗಳೂರಿಗೆ ಆಗಮಿಸಲಿದೆ. ಆದರೆ ಸಮಿತಿಯ ಭೇಟಿ ಮತ್ತು ಚರ್ಚೆಗಳಿಂದ ಮಾತ್ರ ರೈತರ ಸಮಸ್ಯೆ ಬಗೆಹರಿಯುವುದಿಲ್ಲ. ಬೇಡಿಕೆ ಈಡೇರಿಸುವ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೂ ಅವಕಾಶ ನೀಡುವುದಿಲ್ಲ. ಗೋದಾಮುಗಳಿಂದ ಸಕ್ಕರೆ ಮಾರಾಟಕ್ಕೂ ಬಿಡುವುದಿಲ್ಲ ಎಂದು ಚೂನಪ್ಪ ಪೂಜೇರಿ ಎಚ್ಚರಿಸಿದರು.

ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ನಂದಿ, ಪ್ರೇಮ್ ಚೌಗಲಾ, ಕಾರ್ಯಾಧ್ಯಕ್ಷ ರಾಜು ಪೋವಾಲ, ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರಿ, ಸಂಚಾಲಕ ಪಾಂಡುರಂಗ ಬೀರನಗಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ ಮರ್ದಿ ಹಾಗೂ ಮುಖಂಡ ಶ್ರೀಶೈಲ ಅಂಗಡಿ ನೇತೃತ್ವ ವಹಿಸಿದ್ದರು.

ಇನ್ನೊಂದೆಡೆ, ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರವೂ ಮುಂದುವರಿಯಿತು. ವಿವಿಧ ಮಠಾಧೀಶರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ20 ನಿಮಿಷಗಳಲ್ಲಿ ಅಂಬ್ಯುಲೆನ್ಸ್ ತಲುಪದಿದ್ದರೆ ದಂಡ; ಪ್ರತಿ ತಾಲೂಕಿನಲ್ಲಿ 5 ಹಾಸಿಗೆಗಳ ತೀವ್ರ ನಿಗಾ ಘಟಕಪರಿಷತ್ ಚುನಾವಣೆ ಸೋಲು: ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆಸಹಕಾರಿ ಸಂಘಗಳ ಲೆಕ್ಕಪರಿಶೋಧನೆಗೆ 6 ತಿಂಗಳ ಡಿಪ್ಲೊಮಾ ಕೋರ್ಸಎಸ್‌ಐಆರ್ ಕುರಿತು ಕಾಂಗ್ರೆಸ್ ಆರೋಪಗಳಲ್ಲಿ ಹುರುಳಿಲ್ಲ: ಅಶ್ವತ್ಥನಾರಾಯಣಸಕ್ಕರೆ ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಗೋದಾಮುಗಳಿಗೆ ಬೀಗಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರ