ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜಿಪಂ ಎಇಇ ಬನ್ನೂರ ಮನೆಯ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ : ಆದಾಯಕ್ಕಿಂದ ಹೆಚ್ಚಿನ ಆಸ್ತಿಗಳಿಕೆ ಮಾಡಿರುವ ಆರೋಪದ ಮೇರೆಗೆ ಬೆಳಗಾವಿ ಜಿಲ್ಲಾ ಪಂಚಾಯತ ಎಇಇ ಮಹಾದೇವ ಬನ್ನೂರ ಅವರ ಮನೆಯ ಮೇಲೆ ಗುರುವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಬನ್ನೂರ ಅವರ ಮನೆಯ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯ ಕೋಣೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದಾರೆ.

ಹಿಂದೆಯೂ ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ಆಗ ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹ ಮಾಡಿಕೊಂಡು ತೆರಳಿದ್ದರು. ಅದರ ಮುಂದುವರೆದ ಭಾಗವಾಗಿ ಮತ್ತೊಮ್ಮೆ ದಾಳಿ ನಡೆದಿದೆ‌.

ಲೋಕಾಯುಕ್ತ ಡಿವೈಎಸ್ ಪಿ ಭರತ ರೆಡ್ಡಿ ನೇತೃತ್ವದ ತಂಡದಿಂದ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದ್ದಾರೆ‌.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.