ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಬೆಳಗಾವಿ, ಕಲಬುರಗಿ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ. ಬೆಳಗಾವಿ, ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಹಾಗೂ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ದಾಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಮುಂಬೈ ರಸ್ತೆ ಮೇಲಿರುವ ಚೆಕ್ ಪೋಸ್ಟ್ ದಾಳಿ ನಡೆದಿದ್ದು, ದಾಳಿ ವೇಳೆ ನಗದು ಹಣ ಸಿಕ್ಕಿದ್ದು, ಪರಿಶೀಲನೆ ಮುಂದುವರೆದಿದೆ.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.