LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ದೆಹಲಿ ಪ್ರತಿಭಟನೆಗೆ ತೆರಳದಂತೆ ಮಹಾರಾಷ್ಟ್ರ ಪೊಲೀಸರ ನೋಟಿಸ್

ಮುಂಬೈ, ಅ. 9: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಮಹಾರಾಷ್ಟ್ರದ ವಿದ್ಯಾರ್ಥಿಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಭಾಗವಹಿಸದಂತೆ ಪೊಲೀಸರು ನೋಟಿಸ್ ನೀಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಎಡಪಂಥೀಯ ಸಂಘಟನೆಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ. ಆದರೆ, ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 168ರ ಅಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಸಿಜೆಪಿ ಬೆಂಬಲಿಗರಿಗೆ ಮುನ್ನೆಚ್ಚರಿಕೆ ನೋಟಿಸ್‌ಗಳನ್ನು ಜಾರಿಗೊಳಿಸಿದ್ದಾರೆ. ಕೆಲವರಿಗೆ ದೂರವಾಣಿ ಕರೆ ಮಾಡಿ ದೆಹಲಿ ಪ್ರಯಾಣದ ವಿವರಗಳನ್ನೂ ಕೇಳಿದ್ದಾರೆ.

ಥಾಣೆಯ ಹೈಡ್ರಾಲಿಕ್ ಮೆಕಾನಿಕ್ ಪ್ರಥಮೇಶ್ ರಾಂಡಿವೆ ಅವರಿಗೆ ಅಕ್ಟೋಬರ್ 8ರಂದು ಹಿರಿಯ ಪೊಲೀಸ್ ಇನ್‌ಸ್ಪೆಕ್ಟರ್ ಕೃಷ್ಣ ಕೋಕನಿ ನೋಟಿಸ್ ನೀಡಿದ್ದಾರೆ. ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸುವ ಕುರಿತು ಗುಪ್ತ ಮಾಹಿತಿ ಲಭ್ಯವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳಬಾರದು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಅಕ್ಟೋಬರ್ 8ರಂದು ಪೊಲೀಸರು ತಮಗೆ 4 ಬಾರಿ ಕರೆ ಮಾಡಿ ಠಾಣೆಗೆ ಬರುವಂತೆ ಸೂಚಿಸಿದ್ದರು. ಕೆಲಸದ ಕಾರಣದಿಂದ ದೆಹಲಿಗೆ ತೆರಳುತ್ತಿಲ್ಲವಾದರೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ರಾಂಡಿವೆ ಆರೋಪಿಸಿದ್ದಾರೆ.

ನವಿ ಮುಂಬೈನ 68 ವರ್ಷದ ಚಿಮಾಜಿ ಶಿಂಧೆ ಅವರಿಗೂ ಕಾಮೋಠೆ ಠಾಣೆಯ ಹಿರಿಯ ಪೊಲೀಸ್ ಇನ್‌ಸ್ಪೆಕ್ಟರ್ ಜ್ಯೋತಿ ದೇಶಮುಖ್ ನೋಟಿಸ್ ನೀಡಿದ್ದಾರೆ. ಬೇಡಿಕೆಗಳನ್ನು ಕಾನೂನುಬದ್ಧ ಮಾರ್ಗದಲ್ಲಿ ಮುಂದಿಡಬಹುದು. ಆದರೆ, ಅನುಮತಿ ನಿರಾಕರಿಸಿರುವ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಬಾರದು ಎಂದು ಸೂಚಿಸಲಾಗಿದೆ.

ಚಂದ್ರಪುರ, ನಾಗಪುರ, ಪುಣೆ ಸೇರಿದಂತೆ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿಯೂ ಕಾರ್ಯಕರ್ತರಿಗೆ ನೋಟಿಸ್‌ಗಳನ್ನು ನೀಡಲಾಗಿದೆ. ಪ್ರತಿಭಟನೆಗೆ ತೆರಳುವ ಉದ್ದೇಶ, ಪ್ರಯಾಣದ ವ್ಯವಸ್ಥೆ ಹಾಗೂ ಹಣಕಾಸಿನ ನೆರವಿನ ಕುರಿತು ಪೊಲೀಸರು ಮಾಹಿತಿ ಕೇಳಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪೊಲೀಸರ ಕ್ರಮವನ್ನು ಖಂಡಿಸಿದ್ದು, ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿರುವವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಆದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕೆ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಪ್ರತಿಭಟನೆಗೆ ತೆರಳದಂತೆ ಮಹಾರಾಷ್ಟ್ರ ಪೊಲೀಸರ ನೋಟಿಸ್ಸ್ಟಿಂಗ್‌ ಕುತಂತ್ರ: ಮುಂದಿನ ವಾರ ದಾಖಲೆ ಬಿಡುಗಡೆಸಂಕೇಶ್ವರ ಬಳಿ ಅಪಘಾತ: ಟಿಪ್ಪರ್‌ಗೆ ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯಅಂಗನವಾಡಿ ನೇಮಕಾತಿಯಲ್ಲಿ ಹಣ ವಸೂಲಿ ಆರೋಪ: ಹುಕ್ಕೇರಿ ಸಿಡಿಪಿಒಗೆ ನೋಟಿಸ್ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಸಾಧ್ಯತೆನವಲಗುಂದ ಬಳಿ ಭೀಕರ ಅಪಘಾತ: ಕಾರು–ಕ್ಯಾಂಟರ್ ಡಿಕ್ಕಿಗೆ ನಾಲ್ವರ ಬಲಿಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಎಲ್ಲೆಡೆ ನಿರ್ಬಂಧಪ್ರತಿಭಟನೆಗೆ ಪರ್ಯಾಯ ಸ್ಥಳ ಗುರುತಿಸಿ: ಸುಪ್ರೀಂ ಕೋರ್ಟಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ಆರೋಪ: ದೆಹಲಿ ಪೊಲೀಸರಿಗೆ ಎನ್‌ಎಚ್‌ಆರ್‌ಸಿ ನೋಟಿಸ್‘ಸಂವಿಧಾನ ಉಳಿಸಲು ಬೀದಿಗಿಳಿಯಿರಿ’: ದೇಶದ ಜನತೆಗೆ ತುಷಾರ್ ಗಾಂಧಿ ಕರೆ